ಶನಿವಾರ, ಆಗಸ್ಟ್ 20, 2022
21 °C
ಅಮಿತ್‌ ಶಾ ಭೇಟಿಯಾದ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್

ರೈತರ ಪ್ರತಿಭಟನೆ: ಶೀಘ್ರ ಪರಿಹಾರಕ್ಕಾಗಿ ಗೃಹ ಸಚಿವರಲ್ಲಿ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ನೂತನ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ನಡೆಸುತ್ತಿರುವ ರೈತರ ಪ್ರತಿಭಟನೆಯಿಂದಾಗಿ ಪಂಜಾಬ್‌ನ ಆರ್ಥಿಕತೆ ಮತ್ತು ದೇಶದ ಭದ್ರತೆಯ ಮೇಲೆ ತೀವ್ರ ಪರಿಣಾಮಬೀರುತ್ತಿದ್ದು, ಈ ಸಮಸ್ಯೆಗೆ ಸೌಹಾರ್ದ ಪರಿಹಾರ ಸೂಚಿಸುವಂತೆ ಪಂಜಾಬ್‌ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರತಿಭಟನಾ ನಿರತ ರೈತರಲ್ಲಿ ಮನವಿ ಮಾಡಿದರು.

ಸಚಿವ ಅಮಿತ್ ಶಾ ಅವರನ್ನು ಗುರುವಾರ, ಅವರ ನಿವಾಸದಲ್ಲಿ ಭೇಟಿಯಾದ ನಂತರ ಮಾತನಾಡಿದ ಅವರು, ‘ಈ ಸಮಸ್ಯೆಗೆ ಸಾಮಾನ್ಯ ನೆಲೆಯಲ್ಲಿ ಪರಿಹಾರ ಕಂಡುಕೊಳ್ಳಬೇಕು. ಈ ವಿಷಯದಲ್ಲಿ ಎರಡೂ ಕಡೆಯುವರು ಕಠಿಣ ನಿಲುವುಗಳನ್ನು ತೆಗೆದುಕೊಳ್ಳಬಾರದು‘ ಎಂದು ಹೇಳಿದರು.

‘ಶಾ ಅವರನ್ನು ಭೇಟಿಯಾಗಿ, ಸದ್ಯದ ಪರಿಸ್ಥಿತಿಯನ್ನು ವಿವರಿಸಿದ್ದೇನೆ. ಈ ಪ್ರತಿಭಟನೆಯಿಂದ ರಾಜ್ಯದ ಆರ್ಥಿಕತೆ ಮತ್ತು ದೇಶದ ಭದ್ರತೆ ಮೇಲೆ ತೀವ್ರ ಪರಿಣಾಮ ಉಂಟಾಗುವ ಬಗ್ಗೆ ತಿಳಿಸಿದ್ದೇನೆ. ಶೀಘ್ರವೇ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದೇನೆ‘ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಮೂಲಗಳ ಪ್ರಕಾರ, ಅಮರೀಂದರ್ ಸಿಂಗ್ ಅವರು ಶಾ ಅವರನ್ನು ಭೇಟಿಯಾಗುವ ಸಮಯದಲ್ಲಿ, ವಿಜ್ಞಾನ ಭವನದಲ್ಲಿ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತ ಮುಖಂಡರೊಂದಿಗೆ ಸಭೆ ನಡೆಯುತ್ತಿತ್ತು. ಆದರೆ ಗುರುವಾರ ಬೆಳಿಗ್ಗೆ ನಿಗದಿಯಾಗಿದ್ದ ಸಭೆ ಎರಡು ಗಂಟೆಗಳ ಕಾಲ ವಿಳಂಬವಾಗಿ ಆರಂಭವಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು