ಶುಕ್ರವಾರ, ಜನವರಿ 27, 2023
25 °C

ಅಮರಿಂದರ್ ಸಿಂಗ್, ಜಾಖರ್‌ರನ್ನು ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಿಸಿದ ಬಿಜೆಪಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಮಾಜಿ ಸಂಸದ ಸುನೀಲ್ ಜಾಖರ್ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಬಿಜೆಪಿ ತಿಳಿಸಿದೆ. 

ಕಾಂಗ್ರೆಸ್ ಮಾಜಿ ವಕ್ತಾರ ಜೈವೀರ್‌ ಶೆರ್ಗಿಲ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ಹೇಳಿದೆ.

ಅಮರಿಂದರ್ ಸಿಂಗ್ ಅವರು ಹೊಸದಾಗಿ ಸ್ಥಾಪಿಸಿದ್ದ ಪಂಜಾಬ್ ಲೋಕ ಕಾಂಗ್ರೆಸ್‌ (ಪಿಎಲ್‌ಸಿ) ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ, 2022ರ ಸೆ.19ರಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.  

ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನದಿಂದ ಅನಿರೀಕ್ಷಿತವಾಗಿ ನಿರ್ಗಮಿಸಿದ ಬಳಿಕ ಕಾಂಗ್ರೆಸ್ ತೊರೆದಿದ್ದರು. ಬಳಿಕ ಅವರು ಪಂಜಾಬ್ ಲೋಕ ಕಾಂಗ್ರೆಸ್ ಸ್ಥಾಪಿಸಿದ್ದರು.

ಹೆಚ್ಚಿನ ಮಾಹಿತಿ ಅಪ್‌ಡೇಟ್ ಮಾಡಲಾಗುವುದು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು