ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕಾಂಗ ಸಭೆಗೂ ಮುನ್ನ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ರಾಜೀನಾಮೆಗೆ ನಿರ್ಧಾರ

Last Updated 18 ಸೆಪ್ಟೆಂಬರ್ 2021, 11:26 IST
ಅಕ್ಷರ ಗಾತ್ರ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಇಂದು ಸಂಜೆ ಚಂಡೀಗಢದಲ್ಲಿ ನಡೆಯಲಿರುವ ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿಗಳು ಸಂಜೆ ಪಂಜಾಬ್ ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈ ಬಗ್ಗೆ ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರೊಂದಿಗೆ ಮಾತನಾಡಿರುವ ಅಮರೀಂದರ್ ಸಿಂಗ್ ಅವರು, ಪದೇ ಪದೇ ತಮಗಾಗುತ್ತಿರುವ ಅವಮಾನದ ಬಗ್ಗೆ ನೋವು ಮತ್ತು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಧ್ಯಾಹ್ನ 2 ಗಂಟೆ ಬಳಿಕ ಚಂಡೀಗಢದ ಅವರ ಅಧಿಕೃತ ನಿವಾಸದಲ್ಲಿ ನಡೆದ ಆಪ್ತ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.

50 ಕ್ಕೂ ಹೆಚ್ಚು ಶಾಸಕರು, ಅಮರೀಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಕೆಳಗಿಸಬೇಕೆಂದು ಹೈಕಮಾಂಡ್‌ಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಗೆ ಸಿಎಲ್‌ಪಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲು ಎಐಸಿಸಿ ಅನುಮೋದನೆ ನೀಡಿತ್ತು,

ಪಂಜಾಬ್ ವಿಧಾನಸಭೆ ಚುನಾವಣೆ ಕೇವಲ 4 ತಿಂಗಳು ಬಾಕಿ ಉಳಿದಿದ್ದು, ಅಧಿಕಾರ ಹಸ್ತಾಂತರದ ಪ್ರಸಂಗ ಕುತೂಹಲ ಕೆರಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT