ಬುಧವಾರ, ಜುಲೈ 6, 2022
22 °C

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಅವರನ್ನು ಭೇಟಿಯಾದ ಅಮರಿಂದರ್ ಸಿಂಗ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಅವರನ್ನು ಭೇಟಿಯಾಗಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರ ಮುಂದಿನ ನಡೆ ಬಗ್ಗೆ ಊಹಾಪೋಹಗಳ ನಡುವೆ ನಿನ್ನೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದ ಸಿಂಗ್, ಇಂದು ಎನ್ಎಸ್ಎ ಅಜಿತ್ ಡೊಭಾಲ್ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಎಡೆಮಾಡಿದೆ.

ಡೊಭಾಲ್ ಅವರ ನಿವಾಸದಲ್ಲಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆದಿದೆ. ಸಭೆಯ ನಂತರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ನೇರ ಅಮಿತ್ ಶಾ ನಿವಾಸಕ್ಕೆ ತೆರಳಿದ್ದಾರೆ.

ಇದನ್ನೂ ಓದಿ.. ಪಾಕ್‌ ಸಂಪರ್ಕದಲ್ಲಿರುವ ಸಿಧು ಸಿಎಂ ಆದರೆ ಭದ್ರತೆಗೆ ಅಪಾಯಕಾರಿ: ಅಮರೀಂದರ್ ಸಿಂಗ್‌

ಪಕ್ಷದಲ್ಲಿ ತನಗೆ ಅಪಮಾನವಾಗಿದೆ ಎಂದು ಹೇಳಿ, ರಾಜೀನಾಮೆ ನೀಡಿದ್ದ ಅಮರಿಂದರ್ ಸಿಂಗ್ ಅವರು, ನಿನ್ನೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಪಂಜಾಬ್ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಕ್ಕೆ ಎಡೆಮಾಡಿತ್ತು. ಆದರೆ, ಇಂದು ಅವರು ಬಿಜೆಪಿ ಪಕ್ಷ ಸೇರುವುದಿಲ್ಲ. ಕಾಂಗ್ರೆಸ್ ಪಕ್ಷ ತೊರೆಯುತ್ತೇನೆ ಎಂದು ಖಚಿತಪಡಿಸಿದ್ದಾರೆ.

ಅಮಿತ್ ಶಾ ಮತ್ತು ಅಜಿತ್ ಡೊಭಾಲ್ ಭೇಟಿ ವೇಳೆ ಅಮರಿಂದರ್ ಸಿಂಗ್ ಅವರು, ಪಂಜಾಬ್‌ನ ಆಂತರಿಕ ಭದ್ರತಾ ಪರಿಸ್ಥಿತಿಯ ಬಗ್ಗೆಯೂ ಚರ್ಚಿಸಿದ್ದಾರೆ ಎಂದು ಸಿಂಗ್ ಅವರ ಆಪ್ತ ಮೂಲಗಳು ತಿಳಿಸಿವೆ.

'ನವಜೋತ್‌ ಸಿಂಗ್‌ ಸಿಧು ಅಸಮರ್ಥರಾಗಿದ್ದು, ಹಾನಿ ಸೃಷ್ಟಿಸಲಿದ್ದಾರೆ. ಅವರು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾರೆ. ಇದು ರಾಷ್ಟ್ರೀಯ ಭದ್ರತೆಗೂ ಅಪಾಯಕಾರಿʼಎಂದು ರಾಜೀನಾಮೆ ಬಳಿಕ ಅಮರಿಂದರ್ ಸಿಂಗ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು