ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರಿಂದರ್ ಸಿಂಗ್ ಇಂದು ಬಿಜೆಪಿಗೆ ಸೇರ್ಪಡೆ; ಜೆ.ಪಿ ನಡ್ಡಾ ಜೊತೆಗೆ ಮಾತುಕತೆ

Last Updated 19 ಸೆಪ್ಟೆಂಬರ್ 2022, 9:01 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಇಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಳ್ಳಲಿದ್ದಾರೆ.

ಇದಕ್ಕೆ ಪೂರ್ವಭಾವಿಯಾಗಿ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಕಳೆದ ವರ್ಷ ಕಾಂಗ್ರೆಸ್ ಪಕ್ಷದೊಂದಿಗಿನ ಭಿನ್ನಭಿಪ್ರಾಯದಿಂದಾಗಿ ಅಮರಿಂದರ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷವನ್ನು ತೊರೆದಿದ್ದರು. ಬಳಿಕ ಹೊಸತಾದ ಪಂಜಾಬ್ ಲೋಕ ಕಾಂಗ್ರೆಸ್ (ಪಿಎಲ್‌ಸಿ) ಪಕ್ಷ ಸ್ಥಾಪಿಸಿದ್ದರು. ಈಗ ಪಿಎಲ್‌ಸಿ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲಿದ್ದಾರೆ ಎಂದು ವರದಿಯಾಗಿದೆ.

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಪಿಎಲ್‌ಸಿ ಪಕ್ಷವು ಕಣಕ್ಕಿಳಿದಿತ್ತು. ಆದರೆ ಒಂದೇ ಒಂದು ಸ್ಥಾನ ಗೆಲ್ಲುವಲ್ಲಿ ಯಶಸ್ವಿಯಾಗಿರಲಿಲ್ಲ. ಪಟಿಯಾಲ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ವತಃ ಅಮರಿಂದರ್ ಸಿಂಗ್ ಸಹ ಸೋಲು ಅನುಭವಿಸಿದ್ದರು.

ಇತ್ತೀಚೆಗಷ್ಟೇ ಬೆನ್ನುಮೂಳೆ ಶಸ್ತ್ರಚಿಕಿತ್ಸೆ ಬಳಿಕ ಲಂಡನ್‌ನಿಂದ ಮರಳಿದ್ದ ಅಮರಿಂದರ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT