ಶನಿವಾರ, ಜುಲೈ 2, 2022
23 °C

ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಎನ್‌ಐಎ ಮುಂದೆ ಹಾಜರಾದ ಸಚಿನ್ ವಾಜೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಮುಂದೆ ಶನಿವಾರ ಹಾಜರಾಗಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರು ಉದ್ಯಮಿ ಮುಕೇಶ್‌ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಲ್ಲಿನ ಕುಂಬಲ್ಲಾ ಬೆಟ್ಟದಲ್ಲಿರುವ ಎನ್ಐಎ ಕಚೇರಿಗೆ ಶನಿವಾರ ಬೆಳಿಗ್ಗೆ 11.30ಕ್ಕೆ ಹಾಜರಾದ ಸಚಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎಗೆ ಮಾಹಿತಿ ನೀಡಿದರು.

ಫೆ. 25ರಂದು ಮುಕೇಶ್ ಅಂಬಾನಿ ಅವರ ನಿವಾಸ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾಗಿತ್ತು. ಈ ಕುರಿತು ಪ್ರಕರಣದ ತನಿಖೆಯನ್ನು ಎನ್ಐಎ ನಡೆಸುತ್ತಿದೆ. ಸ್ಫೋಟಕ ತುಂಬಿದ್ದ ವಾಹನದಲ್ಲಿ ಬೆದರಿಕೆಯ ಪತ್ರವೂ ಇತ್ತು.

ಮುಕೇಶ್ ಅವರ ನಿವಾದ ಬಳಿ ಪತ್ತೆಯಾಗಿದ್ದ ವಾಹನವು ಮನ್‌ಸುಖ್ ಹಿರೇನ್ ಅವರಿಗೆ ಸೇರಿದ್ದಾಗಿತ್ತು, ಈ ವಾಹನ ಕಳವಾಗಿದ್ದ ಕುರಿತು ವಾರದ ಹಿಂದೆಯಷ್ಟೇ ಹಿರೇನ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಮಾರ್ಚ್ 5ರಂದು ಹಿರೇನ್ ಅವರ ಶವವು ಠಾಣೆ ಸಮೀಪ ಪತ್ತೆಯಾಗಿತ್ತು.

ಗಂಡನ ಅನುಮಾನಾಸ್ಪದ ಸಾವಿನಲ್ಲಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ಪಾತ್ರವಿದೆಯೆಂದು ಆರೋಪಿಸಿ ಹಿರೇನ್ ಅವರ ಪತ್ನಿ ಅನುಮಾನ ವ್ಯಕ್ತಪಡಿಸಿದ್ದರು. ಈ ಕಾರಣಕ್ಕಾಗಿ ಸಚಿನ್ ಅವರನ್ನು ಮುಂಬೈ ಅಪರಾಧ ತನಿಖಾ ದಳದಿಂದ ಹೊರಗಿಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು