ಮಂಗಳವಾರ, ಏಪ್ರಿಲ್ 13, 2021
32 °C

ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಮುಂಬೈನ ಹೋಟೆಲ್‌ನಲ್ಲಿ ಎನ್‌ಐಎ ಶೋಧ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಉದ್ಯಮಿ ಮುಕೇಶ್‌ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಗುರುವಾರ ದಕ್ಷಿಣ ಮುಂಬೈಯ ಹೋಟೆಲ್‌ ಒಂದರಲ್ಲಿ ಶೋಧ ನಡೆಸಿದೆ.

‘ಬಾಬುಲ್‌ನಾಥ್‌ ದೇವಾಸ್ಥಾನದ ಬಳಿಯಿರುವ ಹೋಟೆಲ್‌ನಲ್ಲಿ ಎನ್‌ಐಎ ಮಧ್ಯಾಹ್ನ 12.45ರ ಸುಮಾರಿಗೆ ಶೋಧ ನಡೆಸಿದೆ. ಈ ವೇಳೆ ಅಧಿಕಾರಿಗಳು ಹೋಟೆಲ್‌ ಸಿಬ್ಬಂದಿ ಮತ್ತು ಗ್ರಾಹಕರಿಗೆ ಅಲ್ಲಿಂದ ಹೊರ ನಡೆಯುವಂತೆ ಸೂಚಿಸಿದರು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಸದ್ಯ ಹೋಟೆಲ್‌ನಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ಅವರನ್ನು ಇಲ್ಲಿಗೆ ಈಚೆಗೆ ಕರೆತರಲಾಗಿತ್ತು’ ಎಂದು ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು