ಮಂಗಳವಾರ, ಏಪ್ರಿಲ್ 13, 2021
23 °C

ಏ.9ರವರೆಗೆ ವಾಜೆ ಎನ್‌ಐಎ ವಶಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಬಂಧಿತ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಶಕ್ಕೆ ಒಪ್ಪಿಸಿದ್ದ ಅವಧಿಯನ್ನು ಏಪ್ರಿಲ್‌ 9ರವರೆಗೂ ವಿಸ್ತರಿಸಿದೆ.

ಉದ್ಯಮಿ ಮುಕೇಶ್‌ ಅಂಬಾನಿ ನಿವಾಸದ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಹಾಗೂ ಉದ್ಯಮಿ ಮನ್‌ಸುಖ್‌ ಹಿರೇನ್‌ ಅನುಮಾನಸ್ಪದ ಸಾವಿನ ಪ್ರಕರಣದ ಸಂಬಂಧ ವಾಜೆ ಅವರನ್ನು ಮಾರ್ಚ್‌ 13ರಂದು ಎನ್‌ಐಎ ಬಂಧಿಸಿತ್ತು.

ಬುಧವಾರ ವಾಜೆ ಅವರನ್ನು ವಿಶೇಷ ಎನ್‌ಐಎ ನ್ಯಾಯಾಲಯ ಮುಂದೆ ಹಾಜರುಪಡಿಸಲಾಗಿತ್ತು. ಇನ್ನೂ ಹೆಚ್ಚಿನ ವಿಚಾರಣೆ ನಡೆಸಬೇಕಾಗಿರುವುದರಿಂದ ತಮ್ಮ ವಶಕ್ಕೆ ಒಪ್ಪಿಸಿರುವ ಅವಧಿಯನ್ನು ವಿಸ್ತರಿಸುವಂತೆ ಎನ್‌ಐಎ ಕೋರಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಪಿ.ಆರ್‌. ಸಿತ್ರೆ ಅವರು, ಏಪ್ರಿಲ್‌ 9ರವರೆಗೆ ವಾಜೆ ಅವರನ್ನು ಎನ್‌ಐಎ ವಶಕ್ಕೆ ಒಪ್ಪಿಸಿದರು.

 ಈ ಪ್ರಕರಣದಲ್ಲಿ ಆರೋಪಿಗಳಾಗಿರುವ ಅಮಾನತುಗೊಂಡಿರುವ ಪೊಲೀಸ್‌ ಕಾನ್‌ಸ್ಟೆಬಲ್‌ ವಿನಾಯಕ್‌ ಶಿಂಧೆ ಮತ್ತು ಕ್ರಿಕೆಟ್‌ ಬೂಕಿ ನರೇಶ್‌ ಗೊರ್‌ ಅವರನ್ನು ಮತ್ತೆ 14 ದಿನಗಳ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ವಾಜೆ ಅವರನ್ನು ವಿಚಾರಣೆ ನಡೆಸಲು ಸಹ ಸಿಬಿಐಗೆ ನ್ಯಾಯಾಲಯ ಅನುಮತಿ ನೀಡಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು