ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ರೂಪಾಂತರಿ ಎಕ್ಸ್‌ಬಿಬಿ 1.16 ತಳಿಯ 349 ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಸರ್ಕಾರದ ವೈರಾಣು ಸಂರಚನೆ ವಿಶ್ಲೇಷಣೆ ಸಂಸ್ಥೆಯ (INSACOG) ಅಂಕಿಅಂಶ ತಿಳಿಸಿದೆ.
ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್-19ರ ರೂಪಾಂತರಿ ಎಕ್ಸ್‌ಬಿಬಿ 1.16 ತಳಿಯ ಪ್ರಕರಣಗಳು ಪತ್ತೆಯಾಗಿದೆ. ಇದು ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚಳಕ್ಕೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಗರಿಷ್ಠ 105, ತೆಲಂಗಾಣದಲ್ಲಿ 93, ಕರ್ನಾಟಕದಲ್ಲಿ 61, ಗುಜರಾತ್‌ನಲ್ಲಿ 54
ಎಕ್ಸ್‌ಬಿಬಿ 1.16 ತಳಿಯ ಪ್ರಕರಣ ಪತ್ತೆಯಾಗಿವೆ.
ಜನವರಿಯಲ್ಲಿ ದೇಶದ ಮೊದಲ ಎಕ್ಸ್‌ಬಿಬಿ 1.16 ತಳಿಯ ಪ್ರಕರಣ ಪತ್ತೆಯಾಗಿತ್ತು. ಫೆಬ್ರುವರಿಯಲ್ಲಿ ಈ ಸಂಖ್ಯೆ 140ಕ್ಕೆ ಏರಿಕೆಯಾಗಿತ್ತು.
ದೇಶದಲ್ಲಿ ಗುರುವಾರ ಹೊಸದಾಗಿ 1,300 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,605ಕ್ಕೆ ಏರಿಕೆಯಾಗಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.