ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಎಕ್ಸ್‌ಬಿಬಿ 1.16 ತಳಿಯ 349 ಪ್ರಕರಣ ಪತ್ತೆ

Last Updated 23 ಮಾರ್ಚ್ 2023, 13:44 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ರೂಪಾಂತರಿ ಎಕ್ಸ್‌ಬಿಬಿ 1.16 ತಳಿಯ 349 ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಸರ್ಕಾರದ ವೈರಾಣು ಸಂರಚನೆ ವಿಶ್ಲೇಷಣೆ ಸಂಸ್ಥೆಯ (ಐಎನ್‌ಎಸ್‌ಎಸಿಒಜಿ) ಅಂಕಿಅಂಶ ತಿಳಿಸಿದೆ.

ದೇಶದಲ್ಲಿ ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್-19 ರೂಪಾಂತರಿ ಎಕ್ಸ್‌ಬಿಬಿ 1.16 ತಳಿಯ ಪ್ರಕರಣಗಳು ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ 105, ತೆಲಂಗಾಣದಲ್ಲಿ 93, ಕರ್ನಾಟಕದಲ್ಲಿ 61, ಗುಜರಾತ್‌ನಲ್ಲಿ 54 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದು ಕೊರೊನಾ ಹೆಚ್ಚಾಗುವುದಕ್ಕೆ ಕಾರಣವಾಗುತ್ತಿದೆ ಎಂದು ಹೇಳಲಾಗಿದೆ.

ಜನವರಿಯಲ್ಲಿ ದೇಶದ ಮೊದಲ ಎಕ್ಸ್‌ಬಿಬಿ 1.16 ತಳಿಯ ಪ್ರಕರಣ ಪತ್ತೆಯಾಗಿತ್ತು. ಫೆಬ್ರುವರಿಯಲ್ಲಿ ಈ ಸಂಖ್ಯೆ 140ಕ್ಕೆ ಏರಿಕೆಯಾಗಿತ್ತು.

ದೇಶದಲ್ಲಿ ಗುರುವಾರ ಹೊಸದಾಗಿ 1,300 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಒಬ್ಬರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,605ಕ್ಕೆ ಏರಿಕೆಯಾಗಿದೆ.

ಈ ರೂಪಾಂತರಿಯು ತೀವ್ರ ಅನಾರೋಗ್ಯ ಅಥವಾ ಸಾವಿಗೆ ಕಾರಣವಾಗುವುದಿಲ್ಲ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಏಮ್ಸ್‌ ನಿರ್ದೇಶಕ ಡಾ. ರಣದೀಪ್‌ ಗುಲೇರಿಯಾ ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT