ಬುಧವಾರ, ಸೆಪ್ಟೆಂಬರ್ 30, 2020
23 °C

ಸಚಿವ ಶಾಗೆ ಹೊಸದಾಗಿ ಕೋವಿಡ್‌ ಪರೀಕ್ಷೆ ನಡೆಸಿಲ್ಲ: ಗೃಹ ಸಚಿವಾಲಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಗೃಹ ಸಚಿವ ಅಮಿತ್‌ ಶಾ ಅವರು ಕಳೆದ ವಾರ ಆಸ್ಪತ್ರೆಗೆ ದಾಖಲಾದ ನಂತರ ಅವರಿಗೆ ಹೊಸದಾಗಿ  ಕೋವಿಡ್‌ ಪರೀಕ್ಷೆ ನಡೆಸಿಲ್ಲ ಎಂದು ಗೃಹ ಸಚಿವಾಲಯ ಭಾನುವಾರ ಹೇಳಿದೆ.

ಸಚಿವ ಶಾ ಅವರಿಗೆ ಕೋವಿಡ್‌ ಪರೀಕ್ಷೆ ನಡೆಸಿದ್ದು, ವರದಿ ನೆಗೆಟಿವ್‌ ಬಂದಿದೆ. ಅವರನ್ನು ಸೋಮವಾರ ಮನೆಗೆ ಕಳಿಸಲಾಗುತ್ತದೆ ಎಂಬ ವರದಿಗಳು ಹರಿದಾಡಿದ ಕಾರಣ ಸಚಿವಾಲಯ ಈ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಶಾ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟ ಕಾರಣ ಆಗಸ್ಟ್‌ 2ರಂದು ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು