ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪರಿಣಾಮ| ಜಮ್ಮು ಕಾಶ್ಮೀರದಲ್ಲಿ 1 ರಿಂದ 9ನೇ ತರಗತಿ ಮುಚ್ಚಲು ನಿರ್ಧಾರ

Last Updated 4 ಏಪ್ರಿಲ್ 2021, 8:31 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್‌ 5ರಿಂದ 9ನೇ ತರಗತಿವರೆಗಿನ ಎಲ್ಲಾ ಶಾಲೆಗಳನ್ನು ಮುಚ್ಚಲು ಜಮ್ಮು–ಕಾಶ್ಮೀರ ಆಡಳಿತವು ಭಾನುವಾರ ನಿರ್ಧರಿಸಿದೆ.

‘10ರಿಂದ 12ನೇ ತರಗತಿಗಳನ್ನು ಒಂದು ವಾರಗಳ ಕಾಲ ಮುಚ್ಚಲಾಗುತ್ತದೆ’ ಎಂದು ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅವರು ಟ್ವೀಟ್‌ ಮಾಡಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿವೆ. ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗುಲುವ ಸಾಧ್ಯತೆಯಿದೆ. ಹಾಗಾಗಿ 9 ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಏಪ್ರಿಲ್‌ 18ರವರೆಗೆ ಶಾಲೆಗಳು ಇರುವುದಿಲ್ಲ’ ಎಂದು ಸಿನ್ಹಾ ಅವರ ಕಚೇರಿ ಟ್ವಿಟರ್‌ನಲ್ಲಿ ತಿಳಿಸಿದೆ.

‘ಸಾಮಾಜಿಕ ಮತ್ತು ಸಾಂಪ್ರದಾಯಿಕ ಕಾರ್ಯಕ್ರಮಗಳಲ್ಲಿ ಕೇವಲ 200 ಜನರು ಸೇರಬಹುದು. ಈ ವೇಳೆ ಕೋವಿಡ್‌ ಮಾರ್ಗಸೂಚಿಗಳನ್ನು ಅನುಸರಿಸಬೇಕು’ ಎಂದು ಕಚೇರಿ ಹೇಳಿದೆ.

ಕಳೆದ ಕೆಲವು ವಾರಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಕೋವಿಡ್‌ ‍ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇಲ್ಲಿ ಶನಿವಾರ 501 ಹೊಸ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT