ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಹಿನ್ನೆಲೆ: ಅಮಿತ್‌ ಶಾ ಎರಡು ದಿನಗಳ ಬಂಗಾಳ ಭೇಟಿ 

Last Updated 4 ನವೆಂಬರ್ 2020, 12:50 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಭೇಟಿಗಾಗಿ ನಾಳೆ ಪಶ್ಚಿಮ ಬಂಗಾಳಕ್ಕೆ ತೆರಳಲಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಸಂಸ್ಥಾಪಕ ಬಿಮಲ್ ಗುರುಂಗ್ ಅವರು ಎನ್‌ಡಿಎಯಿಂದ ಹೊರಬಂದು, ತೃಣಮೂಲ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದಾರೆ. ಅವರೊಂದಿಗೆ ಅಮಿತ್‌ ಶಾ ಗುರುವಾರ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಮತಗಳ ಮೇಲೆ ಕಣ್ಣಿಟ್ಟಿರುವುದರಿಂದ ಅವರಿಗೆ ವಿಶೇಷ ಪ್ಯಾಕೇಜ್‌ ಘೋಷಣೆಯಾಗಬಹುದು ಎಂಬ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT