ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮುವಿನ ಮೂರು ಸಮುದಾಯಗಳಿಗೆ ಎಸ್‌ಟಿ ಮೀಸಲಾತಿ: ಗೃಹ ಸಚಿವ ಅಮಿತ್‌ ಶಾ

Last Updated 4 ಅಕ್ಟೋಬರ್ 2022, 10:53 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗುಜ್ಜರ್, ಬಕರ್‌ವಾಲ್‌ ಹಾಗೂ ಪಹಾರಿ ಸಮುದಾಯಗಳಿಗೆ ಶೀಘ್ರದಲ್ಲೇ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ಕಲ್ಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಇಲ್ಲಿನ ರಾಜೌರಿಯಲ್ಲಿ ಮಂಗಳವಾರ ನಡೆದ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತಂದು, ಈ ಸಮುದಾಯಗಳಿಗೆ ಎಸ್‌ಟಿ ಮೀಸಲಾತಿ ಕಲ್ಪಿಸಲಾಗುವುದು ಎಂದು ಹೇಳಿದರು. ಈಗಾಗಲೇ ಲೆಫ್ಟಿನೆಂಟ್ ಗವರ್ನರ್ ಸ್ಥಾಪಿಸಿದ ಆಯೋಗವು ಈ ಮೀಸಲಾತಿಯ ಕುರಿತು ಕೇಂದ್ರಕ್ಕೆ ವರದಿ ಸಲ್ಲಿಸಿದೆ. ಇದನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಅಮಿತ್‌ ಶಾ ಹೇಳಿದರು.

370ನೇ ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಬಗ್ಗೆ ಪ್ರಸ್ತಾಪಿಸಿದ ಅಮಿತ್‌ ಶಾ, ​ 370ನೇ ವಿಧಿ ರದ್ದು ಮಾಡಿದನ್ನು ಇಲ್ಲಿಯ ಜನ ಬೆಂಬಲಿಸಿದ್ದಾರೆ ಎಂದರು.

ಕಲ್ಲುಗಳು, ಬಡಿಗೆಗಳನ್ನು ಹಿಡಿಯುತ್ತಿದ್ದ ಯುವಕರು ಇಂದು ಲ್ಯಾಪ್‌ಟಾಪ್‌ ಹಿಡಿಯುತ್ತಿದ್ದಾರೆ. ಇಂತಹ ಆರೋಗ್ಯಕಾರಿ ಬೆಳವಣಿಗೆಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಆರ್ಪಿಸೋಣ ಎಂದು ಅವರು ಹೇಳಿದರು.

ಈಗಾಗಲೇ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ವಿಧಾನಸಭಾ ಕ್ಷೇತ್ರಗಳನ್ನು ಗುರುತಿಸಲಾಗಿದೆ. ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯು ಬಹುತೇಕ ಮುಗಿದಿದ್ದು, ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT