ಮಂಗಳವಾರ, ಅಕ್ಟೋಬರ್ 19, 2021
23 °C

ಕಲ್ಲಿದ್ದಲು ಉತ್ಪಾದನೆ ಹೆಚ್ಚಳಕ್ಕೆ ಅಮಿತ್ ಶಾ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂಧನ ಸಚಿವ ಆರ್‌.ಕೆ.ಸಿಂಗ್ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಷಿ ಅವರ ಜತೆ ದೇಶದಲ್ಲಿನ ಕಲ್ಲಿದ್ದಲು ಕೊರತೆ ಸಂಬಂಧ ಸೋಮವಾರ ಸಭೆ ನಡೆಸಿದ್ದಾರೆ.

ಪಂಜಾಬ್, ದೆಹಲಿ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಕಲ್ಲಿದ್ದಲು ಪೂರೈಕೆ ಹೆಚ್ಚಿಸುವಂತೆ ಮತ್ತೆ ಮನವಿ ಮಾಡಿಕೊಂಡಿವೆ. ಇದರ ಬೆನ್ನಲ್ಲೇ ಶಾ ಅವರು ಸಭೆ ನಡೆಸಿದ್ದಾರೆ.

ದೇಶದಲ್ಲಿನ ಕಲ್ಲಿದ್ದಲಿನ ಸಂಗ್ರಹ, ಪ್ರತಿನಿತ್ಯ ಕಲ್ಲಿದ್ದಲಿಗೆ ಇರುವ ಬೇಡಿಕೆ, ಪ್ರತಿದಿನ ವಿದ್ಯುತ್‌ಗೆ ಇರುವ ಬೇಡಿಕೆ ಬಗ್ಗೆ ಅವರು ಇಬ್ಬರೂ ಸಚಿವರಿಂದ ಮಾಹಿತಿ ಪಡೆದಿದ್ದಾರೆ.

ಕಲ್ಲಿದ್ದಲಿನ ಉತ್ಪಾದನೆಯನ್ನು ಶೀಘ್ರವೇ ಹೆಚ್ಚಿಸಿ ಎಂದು ಶಾ ಅವರು ಕಲ್ಲಿದ್ದಲು ಸಚಿವರಿಗೆ ಸೂಚನೆ ನೀಡಿದ್ದಾರೆ. ದೇಶದಲ್ಲಿ ಜಲವಿದ್ಯುತ್‌ ಉತ್ಪಾದನೆಯನ್ನು ಹೆಚ್ಚಿಸಿ, ಆ ಮೂಲಕ ಕಲ್ಲಿದ್ದಲಿನ ಮೇಲಿನ ಅವಲಂಬನೆಯನ್ನು ತಗ್ಗಿಸಿ ಎಂದು ಇಂಧನ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು