ಬೋಲ್‌ಪುರ (ಪಶ್ಚಿಮ ಬಂಗಾಳ): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅವರ ಬೆಂಬಲಿಗರು ಸಂಚರಿಸುತ್ತಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ನಡ್ಡಾ ಅವರಿಗೆ ಭದ್ರತೆ ಒದಗಿಸುವ ಜವಾಬ್ದಾರಿ ಹೊತ್ತಿದ್ದ ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ಕರೆಸಿಕೊಂಡಿರುವುದನ್ನು ಶಾ ಸಮರ್ಥಿಸಿಕೊಂಡಿದ್ದಾರೆ. ಐಪಿಎಸ್ ಅಧಿಕಾರಿಗಳಿಗೆ ಕೇಂದ್ರ ಸೇವೆಗೆ ವರ್ಗಾವಣೆ ಮಾಡುವ ಹಕ್ಕು ಕೇಂದ್ರ ಸರ್ಕಾರಕ್ಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಬಂಗಾಳದ ಜನ ಬದಲಾವಣೆ ಬಯಸಿದ್ದಾರೆ: ಅಮಿತ್ ಶಾ

ಮಮತಾ ಸರ್ಕಾರವು ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ರಾಜ್ಯವು ಎಲ್ಲ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಕುಸಿತ ಕಾಣುತ್ತಿದೆ ಎಂದು ಶಾ ದೂರಿದ್ದಾರೆ.

ರಾಜ್ಯ ಸರ್ಕಾರದ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಬ್ಯಾನರ್ಜಿ ಮತ್ತು ಆಡಳಿತಾರೂಢ ಟಿಎಂಸಿಯು ‘ಹೊರಗಿನವ–ಒಳಗಿನವ’ ಎಂಬುದಾಗಿ ಚರ್ಚಿಸುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.

‘ರಾಜ್ಯ ಸರ್ಕಾರದಲ್ಲಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿಗಳಿಗೆ ಕೇಂದ್ರ ಸೇವೆಗೆ ಸಮನ್ಸ್ ನೀಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ. ಅವರಿಗೆ ಏನಾದರೂ ಅನುಮಾನ ಇದ್ದಲ್ಲಿ ಅವರು ಕಾನೂನು ಪುಸ್ತಕದ ಮೊರೆ ಹೋಗಬಹುದು’ ಎಂದು ಶಾ ಹೇಳಿದ್ದಾರೆ.

ಇದನ್ನೂ ಓದಿ:ನಡ್ಡಾ ಕಾರಿನ ಮೇಲೆ ಕಲ್ಲೆಸೆತ; ಆರೋಪ ಅಲ್ಲಗಳೆದ ಟಿಎಂಸಿ

ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ಈ ಮಣ್ಣಿನ ಮಗನನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಲಿದ್ದೇವೆ ಎಂದ ಅಮಿತ್ ಶಾ, ಮಮತಾ ಅವರಿಗೆ ಕೆಲವು ವಿಷಯಗಳು ಮರೆತಿರಬೇಕು ಅಂದುಕೊಂಡಿದ್ದೇನೆ. ಮಮತಾ ಕಾಂಗ್ರೆಸ್‌ನಲ್ಲಿದ್ದಾಗ ಅವರು ಇಂದಿರಾ ಗಾಂಧಿಯನ್ನು ಹೊರಗಿನವರು ಎಂದು ಕರೆದಿದ್ದರೇ? ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರನ್ನೂ ಹೊರಗಿನವರು ಎಂದು ಕರೆದಿದ್ದರೇ? ಒಂದು ರಾಜ್ಯದ ಜನರಿಗೆ ಇತರ ರಾಜ್ಯಗಳಿಗೆ ತೆರಳಲು ಅವಕಾಶವಿಲ್ಲದ ದೇಶವನ್ನು ರಚಿಸಲು ಅವರು ಮುಂದಾಗಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಬಾಂಗ್ಲಾದೇಶದಿಂದ ಅಕ್ರಮ ನುಸುಳುವಿಕೆ ವಿಚಾರದಲ್ಲಿಯೂ ಮಮತಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಾ, ಬಿಜೆಪಿ ಒಳ ನುಸುಳುವಿಕೆ ತಡೆಯಲಿದೆ ಎಂದಿದ್ದಾರೆ.

ಇದನ್ನೂ ಓದಿ:ಪ್ರತಿಭಟನಾ ನಿರತ ರೈತರನ್ನು ತೋಮರ್ ಭೇಟಿ ಮಾಡಲಿದ್ದಾರೆ: ಅಮಿತ್ ಶಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.