ಸೋಮವಾರ, ಜೂನ್ 27, 2022
26 °C

ತಮಿಳುನಾಡಿನಲ್ಲಿ ಎನ್‌ಡಿಎ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ: ಅಮಿತ್ ಶಾ

ಪಿಟಿಐ Updated:

ಅಕ್ಷರ ಗಾತ್ರ : | |

ಕನ್ಯಾಕುಮಾರಿ: ಏಪ್ರಿಲ್ 6ರಂದು ನಡೆಯಲಿರುವ ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗಾಗಿ ಬಿಜೆಪಿ ಅಭಿಯಾನವನ್ನು ಪ್ರಾರಂಭಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕನ್ಯಾಕುಮಾರಿ ಸೇರಿದಂತೆ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ವಿಜಯಶಾಲಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಬಿಜೆಪಿ, ಕನ್ಯಾಕುಮಾರಿ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಅಲ್ಲದೆ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಅಂತಿಮಗೊಳಿಸಿದೆ.

ಏಪ್ರಿಲ್ 6ರಂದು ಒಂದೇ ಹಂತದಲ್ಲಿ ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮತ ಎಣಿಕೆ ಮೇ 2ರಂದು ನೆರವೇರಲಿದೆ.

ಇದನ್ನೂ ಓದಿ: 

ಕನ್ಯಾಕುಮಾರಿಯಲ್ಲಿ ಪಕ್ಷದ ಅಭಿಯಾನವನ್ನು ಪ್ರಾರಂಭಿಸಿ ಮಾತನಾಡಿದ ಅಮಿತ್ ಶಾ, ಎನ್‌ಡಿಎ ಮೈತ್ರಿಕೂಟ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ, ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರನ್ನು ಕಣಕ್ಕಿಳಿಸಿದೆ.

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಬಿಜೆಪಿಯ ಕಮಲ ಚಿಹ್ನೆಯನ್ನು ಮನೆ ಮನೆಗೆ ತಲುಪಿಸಲು ಅಭಿಯಾನವನ್ನು ಆರಂಭಿಸಿದ್ದೇವೆ. ಅಲ್ಲದೆ ರಾಧಾಕೃಷ್ಣನ್ ಅವರಿಗೆ ಮತ ಹಾಕಲು ಸಾರ್ವಜನಿಕರಿಗೆ ವಿನಂತಿ ಮಾಡುತ್ತಿದ್ದು, ಪಕ್ಷಕ್ಕೆ ಅವರ ಅವಶ್ಯಕತೆಯಿದೆ ಎಂದು ಹೇಳಿದರು.

ಜನರ ಉತ್ಸಾಹವನ್ನು ನೋಡಿದಾಗ ಕನ್ಯಾಕುಮಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶದ ಬಗ್ಗೆ ನನಗೆ ಖಾತರಿಯಿದ್ದು, ಎನ್‌ಡಿಎ ಮೈತ್ರಿಕೂಟ ವಿಜಯಶಾಲಿಯಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.

ಅಂದ ಹಾಗೆ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಒಪ್ಪಂದ ಮಾಡಿಕೊಂಡಿರುವ ಬಿಜೆಪಿ, 20 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು