ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿಯಾಗುವ ಆಸೆಯಿಂದ ಬಿಜೆಪಿ ಬೆನ್ನಿಗೆ ಇರಿದ ನಿತೀಶ್: ಅಮಿತ್ ಶಾ ವಾಗ್ದಾಳಿ

Last Updated 23 ಸೆಪ್ಟೆಂಬರ್ 2022, 9:18 IST
ಅಕ್ಷರ ಗಾತ್ರ

ಪೂರ್ಣಿಯಾ (ಬಿಹಾರ): ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಧಾನಿಯಾಗುವ ಆಸೆಯಿಂದ ಬಿಜೆಪಿಯ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರಿದರು.

ಬಿಹಾರದ ಪೂರ್ಣಿಯಾದಲ್ಲಿ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ನಿತೀಶ್ ಅವರು 2014ರಲ್ಲಿಯೂ ಹೀಗೆಯೇ ಮಾಡಿದ್ದರು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಜನತೆ ‘ಮಹಾ ಮೈತ್ರಿ’ಗೆ ತಕ್ಕ ಪಾಠ ಕಲಿಸಲಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ದೊರೆಯಲಿದ್ದು, ಸರ್ಕಾರ ರಚಿಸಲಿದೆ ಎಂದು ಶಾ ಹೇಳಿರುವುದಾಗಿ ‘ಪಿಟಿಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.

‘ಸ್ವಾರ್ಥ ಮತ್ತು ಅಧಿಕಾರದ ರಾಜಕಾರಣಕ್ಕೆ ಬದಲಾಗಿ ನಾವು ಸೇವೆ ಮತ್ತು ಅಭಿವೃದ್ಧಿಯ ರಾಜಕಾರಣದಲ್ಲಿ ನಂಬಿಕೆ ಇರಿಸಿದ್ದೇವೆ’ ಎಂದು ಅವರು ಹೇಳಿದರು.

‘ಲಾಲು ಮಡಿಲಲ್ಲಿ ಕುಳಿತವರಿಗೆ ಜನರಿಂದ ಪಾಠ’

‘ಬಿಜೆಪಿಯ ಬೆನ್ನಿಗೆ ಚೂರಿ ಹಾಕಿರುವ ನಿತೀಶ್ ಕುಮಾರ್ ಈಗ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರ ಮಡಿಲಲ್ಲಿ ಕುಳಿತಿದ್ದಾರೆ. ರಾಜ್ಯದ ಜನತೆ ಅವರಿಗೆ ತಕ್ಕ ಉತ್ತರ ನೀಡಲಿದೆ’ ಎಂದು ಶಾ ಹೇಳಿದರು.

‘ಈಗ ಇಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಆದರೆ, ಭಯಪಡುವ ಅಗತ್ಯವಿಲ್ಲ ಎಂಬುದಾಗಿ ಹೇಳಲು ಬಯಸುತ್ತೇನೆ. ನಿಮ್ಮೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವಿದೆ’ ಎಂದು ಶಾ ಹೇಳಿರುವುದಾಗಿ ಬಿಜೆಪಿ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT