ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದ ಭದ್ರತಾ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಜತೆ ಅಮಿತ್ ಶಾ ಮಾತುಕತೆ

Last Updated 19 ಅಕ್ಟೋಬರ್ 2021, 9:59 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಪ್ರಧಾನಿಯವರ ನಿವಾಸಕ್ಕೆ ತೆರಳಿದ ಅಮಿತ್ ಶಾ ಕಾಶ್ಮೀರದಲ್ಲಿನ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದಾರೆ. ಜತೆಗೆ, ಜಮ್ಮು–ಕಾಶ್ಮೀರದಲ್ಲಿ ಭದ್ರತೆಗೆ ಸಂಬಂಧಿಸಿ ಅಲ್ಲಿನ ಆಡಳಿತ ಹಾಗೂ ಕೇಂದ್ರ ಗೃಹ ಸಚಿವಾಲಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಉಗ್ರರು ನಾಗರಿಕರನ್ನು ಹತ್ಯೆ ಮಾಡಿದ ಬಳಿಕ ಕಾಶ್ಮೀರದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿರುವ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ. ಆಂತರಿಕ ಭದ್ರತೆಗೆ ಸಂಬಂಧಿಸಿದ ಇತರ ವಿಚಾರಗಳ ಬಗ್ಗೆಯೂ ಚರ್ಚೆ ನಡೆದಿದೆ. ವಲಸಿಗರು ಭೀತಿಯಿಂದ ಕಾಶ್ಮೀರ ತೊರೆಯುತ್ತಿದ್ದಾರೆ ಎಂದೂ ಗೃಹ ಸಚಿವರು ಪ್ರಧಾನಿಗೆ ತಿಳಿಸಿದ್ದಾರೆ.

ಕಳೆದ 16 ದಿನಗಳಲ್ಲಿ ಇತರ ರಾಜ್ಯಗಳಿಂದ ಬಂದ 11 ಮಂದಿಯನ್ನು ಕಾಶ್ಮೀರದಲ್ಲಿ ಉಗ್ರರು ಹತ್ಯೆ ಮಾಡಿದ್ದಾರೆ.

ಕಾಶ್ಮಿರಕ್ಕೆ ಭೇಟಿ ನೀಡಲಿದ್ದಾರೆ ಅಮಿತ್ ಶಾ

ಅಮಿತ್ ಶಾ ಅವರು ಅ.23ರಿಂದ 25ರ ವರೆಗೆ ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಕಣಿವೆ ರಾಜ್ಯದಲ್ಲಿನ ಭದ್ರತಾ ಸ್ಥಿತಿಗತಿಗೆ ಸಂಬಂಧಿಸಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT