ನವದೆಹಲಿ: ಬಿಹಾರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
ಬಿಹಾರದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರೊಂದಿಗೆ ಅಮಿತ್ ಶಾ ಚರ್ಚೆ ನಡೆಸಿದ್ದು, ಈಗಿನ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಹಾರ ಸರ್ಕಾರದ ಕೋರಿಕೆಯ ಮೇರೆಗೆ ಘರ್ಷಣೆಯನ್ನು ನಿಯಂತ್ರಿಸಲು ಹೆಚ್ಚುವರಿ ಅರೆಸೇನಾ ಪಡೆಗಳನ್ನು ಬಿಹಾರಕ್ಕೆ ರವಾನಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.
ರಾಮನವಮಿ ನಿಮಿತ್ತ ಶೋಭಾ ಯಾತ್ರೆ ವೇಳೆ ಸಸಾರಾಮ್ ಮತ್ತು ಬಿಹಾರ ಷರೀಫ್ ಪಟ್ಟಣಗಳಲ್ಲಿ ಘರ್ಷಣೆ ಭುಗಿಲೆದ್ದಿತ್ತು. ಈ ಎರಡು ಪ್ರದೇಶಗಳಲ್ಲಿ ಶನಿವಾರದವರೆಗೆ 45 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂಸಾಚಾರದಲ್ಲಿ ಹಲವರು ಗಾಯಗೊಂಡಿದ್ದು, ಮನೆ, ವಾಹನ, ಅಂಗಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಮತ್ತೆ ಘರ್ಷಣೆಯ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಅಹಿತಕರ ಘಟನೆ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ಬಿಹಾರ ಭೇಟಿ ರದ್ದುಗೊಂಡಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.