ಮಂಗಳವಾರ, ಜನವರಿ 19, 2021
18 °C

ರವೀಂದ್ರನಾಥ ಟ್ಯಾಗೋರ್‌ಗೆ ಗೌರವ ಅರ್ಪಿಸಿದ ಅಮಿತ್‌ ಶಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶಾಂತಿನಿಕೇತನ(ಪಶ್ಚಿಮ ಬಂಗಾಳ): ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭಾನುವಾರ ವಿಶ್ವ–ಭಾರತಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಇಲ್ಲಿನ ರವೀಂದ್ರ ಭವನದಲ್ಲಿ ಗುರುದೇವ್‌ ರವೀಂದ್ರನಾಥ ಟ್ಯಾಗೋರ್‌ ಅವರ ಗೌರವಾರ್ಥ ನಮನ ಸಲ್ಲಿಸಿದರು.

ಅಮಿತ್‌ ಶಾ ಅವರು ಉಪಾಸನಾ ಗೃಹ (ಪ್ರಾರ್ಥನಾ ಗೃಹ) ಮತ್ತು ಸಂಗೀತ ಭವನಕ್ಕೆ ಭೇಟಿ ನೀಡಲಿದ್ದಾರೆ. ಇಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದಲ್ಲಿ ರವೀಂದ್ರನಾಥ ಟ್ಯಾಗೋರ್‌ ಅವರು ರಚಿಸಿದ ಗೀತೆಗಳನ್ನು ಹಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮಿತ್‌ ಶಾ ಬಿಗಿ ಭದ್ರತೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಆಗಮಿಸಿದರು. ಸುಮಾರು ಒಂದೂವರೆ ಗಂಟೆಯ ತನಕ ಅಲ್ಲಿ ಇದ್ದರು. ಪಶ್ಚಿಮ ಬಂಗಾಳದಲ್ಲಿ ಎರಡು ದಿನದ ಪ್ರವಾಸದಲ್ಲಿರುವ ಅಮಿತ್ ಶಾ ಅವರು, ಎರಡನೇ ದಿನ ರವೀಂದ್ರ ಭವನಕ್ಕೆ ಭೇಟಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು