ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ 30-40 ವರ್ಷಗಳು ಬಿಜೆಪಿ ಯುಗ: ಅಮಿತ್‌ ಶಾ

Last Updated 3 ಜುಲೈ 2022, 9:11 IST
ಅಕ್ಷರ ಗಾತ್ರ

ಹೈದರಾಬಾದ್‌: ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಲಿದೆ ಮತ್ತು ಭಾರತ ವಿಶ್ವಗುರುವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿದ್ದಾರೆ.

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅಮಿತ್‌ ಶಾ, ವಂಶಾಡಳಿತ, ಜಾತಿ ರಾಜಕಾರಣ ಮತ್ತು ತುಷ್ಟೀಕರಣ ಪ್ರಮುಖ ಶಾಪಗಳಾಗಿವೆ. ರಾಷ್ಟ್ರವು ಹಲವು ವರ್ಷಗಳಿಂದ ಹಿಂದುಳಿಯಲು ಇವುಗಳೇ ಕಾರಣ ಎಂದರು.

ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಮಿತ್‌ ಶಾ ಅವರ ಭಾಷಣದಲ್ಲಿ ಆಡಿದ ಮಾತುಗಳನ್ನು ಚುಟುಕಾಗಿ ವಿವರಿಸಿದರು. ಬಿಜೆಪಿಯ ಅಭಿವೃದ್ಧಿ ಪರ ರಾಜಕಾರಣಕ್ಕೆ ರಾಷ್ಟ್ರದ ಜನರು ಸಮ್ಮತಿ ಸೂಚಿಸಿದ್ದಾರೆ. ಹಾಗಾಗಿ ಬಿಜೆಪಿ ಚುನಾವಣೆಗಳಲ್ಲಿ ಸರಣಿ ಜಯವನ್ನು ಕಾಣುತ್ತಿದೆ. ಕುಟುಂಬ ರಾಜಕಾರಣ, ಜಾತಿ ರಾಜಕಾರಣ, ತುಷ್ಟೀಕರಣಗಳೆಲ್ಲವೂ ಅಂತ್ಯಗೊಳ್ಳುತ್ತಿವೆ ಎಂದರು.

ಬಿಜೆಪಿಯು ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಲ್ಲಿರುವ ಕುಟುಂಬ ರಾಜಕಾರಣವನ್ನು ಅಂತ್ಯಗೊಳಿಸಲಿದೆ. ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಒಡಿಶಾ ಸೇರಿದಂತೆ ಮತ್ತಿತರ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಯಾವೆಲ್ಲ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಇಲ್ಲವೋ ಅಲ್ಲೆಲ್ಲ ಕೇಸರಿ ಧ್ವಜ ಅರಳಲಿದೆ ಎಂದು ಅಮಿತ್‌ ಶಾ ಹೇಳಿದ್ದಾರೆ.

ದಕ್ಷಿಣ ಭಾರತದಲ್ಲಿ ಪಕ್ಷವನ್ನು ಬೆಳೆಸುವುದು ಕಾರ್ಯಕಾರಿಣಿ ಸಭೆಯ ಒಟ್ಟು ಆಶಯ ಎಂದು ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT