ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ: ಸಂಸದೆ ನವನೀತ್ ರಾಣಾ ಮನವಿ

ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿರುವಬಂಡಾಯ ಶಾಸಕರ ಕುಟುಂಬದವರಿಗೆ ನೀಡಿದ್ದ ಭದ್ರತೆಯನ್ನು ಅಲ್ಲಿನ ಸರ್ಕಾರ ಹಿಂಪಡೆದಿದೆ. ಈ ಕ್ರಮವನ್ನು ಅಮರಾವತಿ ಸಂಸದೆ ನವನೀತ್‌ ರಾಣಾ ಟೀಕಿಸಿದ್ದಾರೆ.

ರಾಣಾ ಅವರು,'ಉದ್ಧವ್‌ ಠಾಕ್ರೆ ಸರ್ಕಾರ ತೊರೆದು, ತಮ್ಮದೇ ನಿರ್ಧಾರ ಕೈಗೊಂಡಿರುವ ಹಾಗೂ ಬಾಳಾ ಸಾಹೇಬರ ಚಿಂತನೆಗಳಿಗೆ ಬದ್ಧವಾಗಿರುವ ಶಾಸಕರ ಕುಟುಂಬಗಳಿಗೆ ಭದ್ರತೆ ಒದಗಿಸುವಂತೆ ಅಮಿತ್‌ ಶಾ ಅವರಲ್ಲಿ ಮನವಿ ಮಾಡುತ್ತೇನೆ. ಉದ್ಧವ್‌ ಠಾಕ್ರೆ ಅವರ ಗೂಂಡಾಗಿರಿ ಕೊನೆಯಾಗಬೇಕು. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ವಿನಂತಿಸುತ್ತೇನೆ' ಎಂದು ಹೇಳಿರುವುದಾಗಿ ಎಎನ್‌ಐ ಟ್ವೀಟ್ ಮಾಡಿದೆ.

ಬಂಡಾಯ ಶಾಸಕ ತಾನಾಜಿ ಸಾವಂತ್‌ ಅವರ ಕಚೇರಿ ಮೇಲೆ ಶಿವಸೇನಾ ಕಾರ್ಯಕರ್ತರು ಶನಿವಾರ ದಾಳಿ ಮಾಡಿದ್ದಾರೆ.ಪುಣೆಯ ಕತ್ರಾಜ್‌ ಉಪನಗರದ ಬಾಲಾಜಿ ಪ್ರದೇಶದಲ್ಲಿರುವ ಸಾವಂತ್‌ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಶಿವಸೇನಾದ ಪುಣೆ ನಗರ ಘಟಕದ ಮುಖ್ಯಸ್ಥ ಸಂಜಯ್‌ ಮೋರೆ, 'ನಮ್ಮ ಪಕ್ಷದ ಕಾರ್ಯಕರ್ತರು ತಾನಾಜಿ ಸಾವಂತ್‌ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ನಮ್ಮು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ತೊಂದರೆ ನೀಡುತ್ತಿರುವ ಎಲ್ಲಾ ಬಂಡಾಯ ಶಾಸಕರು ಇಂತಹ ಸಮಸ್ಯೆಗಳನ್ನು ಎದುರಿಸಲಿದ್ದಾರೆ. ಅವರ ಕಚೇರಿಗಳ ಮೇಲೂ ದಾಳಿ ನಡೆಸಲಾಗುತ್ತದೆ. ಇದರಿಂದ ಯಾರೂ ತಪ್ಪಿಸಿಕೊಳ್ಳಲಾರರು' ಎಂದು ಎಚ್ಚರಿಕೆ ನೀಡಿದ್ದಾರೆ.

ಶಿವಸೇನಾದ ಕನಿಷ್ಠ 38 ಶಾಸಕರು ಮತ್ತು 10 ಪಕ್ಷೇತರರು ಏಕನಾಥ ಶಿಂಧೆ ನೇತೃತ್ವದಲ್ಲಿ ಅಸ್ಸಾಂನ ಗುವಾಹಟಿಯ ಹೋಟೆಲ್‌ವೊಂದರಲ್ಲಿ ಬೀಡುಬಿಟ್ಟಿದ್ದಾರೆ. ಇದರಿಂದಾಗಿ ಶಿವಸೇನಾ, ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಮೈತ್ರಿಕೂಟದ 'ಮಹಾ ವಿಕಾಸ ಆಘಾಡಿ' ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT