ವಿವಾಹಕ್ಕೂ ಮುನ್ನ ಭಿತ್ತಿಪತ್ರ ಪ್ರದರ್ಶಿಸಿ ರೈತರನ್ನು ಬೆಂಬಲಿಸಿದ ಮದುಮಗ

ಅಮೃತಸರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ರಾಜಧಾನಿ ದೆಹಲಿಯ ಒಳಗೂ ಹೊರಗೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರಿಗೆ ವಿವಿಧೆಡೆಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ. ಅಮೃತಸರದ ಮದುಮಗನೊಬ್ಬ ಮದುವೆಗೂ ಮುನ್ನ ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ರೈತರಿಗೆ ಬೆಂಬಲ ವ್ಯಕ್ತಪಡಿಸಿದ್ದಾನೆ.
ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆಗಳನ್ನ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿರುವ ಅಮೃತಸರದ ಮದುಮಗ ಕಾರಿನ ಮೇಲೆ ರೈತರನ್ನ ಬೆಂಬಲಿಸುವುದಾಗಿ ಭಿತ್ತಿಪತ್ರ ಅಂಟಿಸಿಕೊಂಡು ನವದೆಹಲಿಗೆ ಮದುವೆಗೆ ತೆರಳಿದ್ದಾನೆ.
ಈ ಮಧ್ಯೆ, ಪ್ರತಿಭಟನಾನಿರತ ರೈತರನ್ನು ಭೇಟಿ ಮಾಡಿದ ಆತ ಭಿತ್ತಿಪತ್ರ ಹಿಡಿದು ರೈತರಿಗೆ ಬೆಂಬಲ ಸೂಚಿಸಿದ್ದಾನೆ. ಕುಟುಂಬ ವರ್ಗ ಸಹ ಮದುಮಗನ ಜೊತೆ ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿತು.
ಕೃಷಿ ಕಾಯ್ದೆಗಳನ್ನ ಹಿಂಪಡೆಯಬೇಕೆಂದು ರೈತರು ನಡೆಸುತ್ತಿರುವ ಹೋರಾಟ 19ನೇ ದಿನಕ್ಕೆ ಕಾಲಿಟ್ಟಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.