ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

35 ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ಮತ್ತೊಂದು ವಿಮಾನ!

Last Updated 19 ಜನವರಿ 2023, 5:47 IST
ಅಕ್ಷರ ಗಾತ್ರ

ನವದೆಹಲಿ: ಇತ್ತೀಚೆಗೆ ವಿಮಾನಯಾನ ಸಂಸ್ಥೆಗಳು ಅಜಾಗರೂಕತೆಯಿಂದ ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರುತ್ತಿರುವ ಘಟನೆಗಳು ಹೆಚ್ಚುತ್ತಿದ್ದು, ಅಮೃತಸರ–ಸಿಂಗಪುರ ಮಾರ್ಗದ ಸ್ಕೂಟ್ ಏರ್‌ಲೈನ್ಸ್ ವಿಮಾನವು ಬುಧವಾರ 35 ಪ್ರಯಾಣಿಕರನ್ನು ಬಿಟ್ಟು ಟೇಕಾಫ್‌ ಆಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಮೃತಸರದಿಂದ ಸಿಂಗಪುರ ಮಾರ್ಗದ ಸ್ಕೂಟ್ ಏರ್‌ಲೈನ್ಸ್ ವಿಮಾನವು ಬುಧವಾರ 35 ಪ್ರಯಾಣಿಕರನ್ನು ಬಿಟ್ಟು ಹೊರಟಿದೆ ಎಂದು ವರದಿಯಾಗಿದ್ದು, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಈ ವೈಫಲ್ಯದ ಬಗ್ಗೆ ತನಿಖೆಗೆ ಆದೇಶಿಸಿದೆ.

ಅಮೃತಸರ ವಿಮಾನ ನಿಲ್ದಾಣದಿಂದ ವಿಮಾನವು ಬುಧವಾರ ರಾತ್ರಿ 7.55 ಕ್ಕೆ ಹೊರಡಬೇಕಿತ್ತು, ಆದರೆ 35 ಪ್ರಯಾಣಿಕರನ್ನು ಬಿಟ್ಟು 3 ಗಂಟೆಗೆ ಟೇಕ್ ಆಫ್ ಆಗಿತ್ತು. ಘಟನೆಗೆ ಕಾರಣ ತಿಳಿದುಬಂದಿಲ್ಲ.

ಘಟನೆಯಿಂದ ಕೆರಳಿದ ಪ್ರಯಾಣಿಕರು ಅಮೃತಸರ ವಿಮಾನ ನಿಲ್ದಾಣದಲ್ಲಿಯೇ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ದಾಖಲಿಸಿದ್ದಾರೆ.

ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಗೋ ಫಸ್ಟ್ ವಿಮಾನವು 55 ಪ್ರಯಾಣಿಕರನ್ನು ಬಿಟ್ಟು ಹಾರಿದ್ದು ಇತ್ತೀಚೆಗೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT