ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರ ಪತ್ನಿ ಅಮೃತಾ ಅವರಿಗೆ ಲಂಚದ ಆಮಿಷ ಒಡ್ಡಿದ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಬುಕ್ಕಿ ಅನಿಲ್ ಜೈಸಿಂಘಾನಿ ಎಂಬಾತನನ್ನು ಗುಜರಾತ್‌ನಲ್ಲಿ ಬಂಧಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಸಿಂಘಾನಿ ಪುತ್ರಿ ಅನಿಷ್ಕಾಳನ್ನು ಮುಂಬೈ ಪೊಲೀಸರು ಕೆಲ ದಿನಗಳ ಹಿಂದಷ್ಟೇ ಬಂಧಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅನಿಲ್ ಜೈಸಿಂಘಾನಿ ವಿರುದ್ಧದ ಸುಮಾರು 14–15 ಪ್ರಕರಣಗಳು ಇತ್ಯರ್ಥವಾಗಬೇಕಿದೆ. ಆತನನ್ನು ಗುಜರಾತ್‌ನಲ್ಲಿ ಬಂಧಿಸಲಾಗಿದೆ ಎಂದು ಅಪರಾಧ ವಿಭಾಗದ ಪೊಲೀಸರು ಖಚಿತಪಡಿಸಿದ್ದಾರೆ. ಆದರೆ, ಹೆಚ್ಚಿನ ವಿವರ ನೀಡಿಲ್ಲ.
ವಸ್ತ್ರ ವಿನ್ಯಾಸಕಿಯಾಗಿರುವ ಅನಿಷ್ಕಾ, ಕ್ರಿಮಿನಲ್ ಪ್ರಕರಣವೊಂದರಲ್ಲಿ ನೆರವಾಗುವಂತೆ ತಮಗೆ ಲಂಚದ ಆಮಿಷ ಒಡ್ಡಿ, ಪರೋಕ್ಷವಾಗಿ ಬೆದರಿಕೆ ಹಾಕಿದ್ದಾಳೆ ಎಂದು ಆರೋಪಿಸಿ ಅಮೃತಾ ಫಡಣವಿಸ್ ಅವರು ಮಲಬಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅನಿಷ್ಕಾಳನ್ನು ಮಾರ್ಚ್ 17ರಂದು ಬಂಧಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.