ದೆಹಲಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಸಂಜೆ 6.51ರ ಸುಮಾರಿಗೆ ಕಂಪನ ಉಂಟಾಗಿದ್ದು, ಮೊಯಿರಾಂಗ್‌ನಿಂದ 67 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಹೇಳಿದೆ.
ಮಾರ್ಚ್ 21ರಂದು ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿತ್ತು.
ದೆಹಲಿ ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿತ್ತು. ಬುಧವಾರವೂ ದೆಹಲಿಯಲ್ಲಿ ಕಂಪನ ಉಂಟಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.