ಸೋಮವಾರ, ಜನವರಿ 24, 2022
29 °C

ವೈಷ್ಣೋ ದೇವಿ ಭವನದಲ್ಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ತಲಾ ₹ 12 ಲಕ್ಷ ಪರಿಹಾರ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮ ಮತ್ತು ಕಾಶ್ಮೀರದ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 12 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದು, 13ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮೃತರ ಕುಟುಂಬಕ್ಕೆ ತಲಾ ₹ 10 ಲಕ್ಷ ಮತ್ತು ಗಾಯಾಳುಗಳಿಗೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಪ್ರಧಾನ ಮಂತ್ರಿ ವಿಪತ್ತು ಪರಿಹಾರ ನಿಧಿಯಿಂದಲೂ ಮೃತರ ಕುಟುಂಬಕ್ಕೆ ತಲಾ ₹ 2 ಲಕ್ಷ ಮತ್ತು ಗಾಯಾಳುಗಳಿಗೆ ತಲಾ ₹ 50,000 ಪರಿಹಾರ ಘೋಷಿಸಲಾಗಿದೆ.

 

ಮಧ್ಯರಾತ್ರಿ 2.45ರ ಸುಮಾರಿಗೆ ಯಾತ್ರಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ತಳ್ಳಾಡಿದ್ದಾರೆ. ಈ ಸಂದರ್ಭ ಕಾಲ್ತುಳಿತ ಸಂಭವಿಸಿದೆ.

ವೈಷ್ಣೋ ದೇವಿ ಮಂದಿರದ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅತೀವ ದುಃಖ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ.. ವೈಷ್ಣೋ ದೇವಿ ಮಂದಿರದಲ್ಲಿ ಕಾಲ್ತುಳಿತ: 12 ಜನರ ಸಾವು, ಹಲವರಿಗೆ ಗಾಯ

ಈ ಮಧ್ಯೆ, ಯಾತ್ರಾರ್ಥಿಗಳ ನೆರವಿಗಾಗಿ ಹೆಲ್ಪ್‌ಲೈನ್ ಸ್ಥಾಪಿಸಲಾಗಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು