ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಲ್ಲಿ ರಕ್ತಹೀನತೆ ಪ್ರಮಾಣ ಶೇ 9ರಷ್ಟು ಹೆಚ್ಚಳ: ಆರೋಗ್ಯ ಸಮೀಕ್ಷೆ

Last Updated 5 ಆಗಸ್ಟ್ 2022, 14:57 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಆರು ತಿಂಗಳಿನಿಂದ 5 ವರ್ಷದೊಳಗಿನ ಮಕ್ಕಳಲ್ಲಿ ರಕ್ತಹೀನತೆ ಪ್ರಮಾಣ ಶೇಕಡ 9ಕ್ಕಿಂತ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಯಲ್ಲಿ ಮಾಹಿತಿ ನೀಡಿದೆ.

2015–16ರ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (ಎನ್‌ಎಫ್‌ಎಚ್ಎಸ್‌-4) ಪ್ರಕಾರ, ರಕ್ತಹೀನತೆಯಿಂದ ಬಳಲುವ ಮಕ್ಕಳ ಪ್ರಮಾಣ ಶೇಕಡ 58.6ರಷ್ಟಿತ್ತು. ಆದರೆ 2019–21ರ ಸಮೀಕ್ಷೆಯಲ್ಲಿ ಈ ಪ್ರಮಾಣ ಶೇಕಡ 67.1ಕ್ಕೆ ಏರಿಕೆಯಾಗಿದೆ.

ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಅವರು, ‘ಎನ್‌ಎಫ್‌ಎಚ್‌ಎಸ್‌–5 ಪ್ರಕಾರ ಲಡಾಕ್‌ನಲ್ಲಿ 6 ತಿಂಗಳಿನಿಂದ 5 ವರ್ಷದೊಳಗಿನ ಮಕ್ಕಳಲ್ಲಿ ರಕ್ತಹೀನತೆ ಗರಿಷ್ಠ ಪ್ರಮಾಣದಲ್ಲಿದೆ(ಶೇ 90ರಷ್ಟು). ನಂತರದಲ್ಲಿ ಗುಜರಾತ್‌ (ಶೇ 80), ದಾದ್ರಾ ಮತ್ತು ನಗರ್‌ ಹವೇಲಿ, ದಾಮನ್‌ ಮತ್ತು ದಿಯು(ಶೇ 76), ಮಧ್ಯಪ್ರದೇಶ ಮತ್ತು ಜಮ್ಮು–ಕಾಶ್ಮೀರ (ಶೇ 73) ಮತ್ತು ಪಂಜಾಬ್‌ ಮತ್ತು ರಾಜಸ್ಥಾನ (ಶೇ 71) ಇದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ರಕ್ತಹೀನತೆ ಪ್ರಮಾಣ ಕಡಿಮೆ ಮಾಡಲು ಸರ್ಕಾರ ಪೋಷಣ್‌ ಅಭಿಯಾನವನ್ನು ಆರಂಭಿಸಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT