ಬುಧವಾರ, ಆಗಸ್ಟ್ 10, 2022
25 °C

ಅಗ್ನಿಪಥ ಪ್ರತಿಭಟನೆ ಮಧ್ಯೆ ಅಗ್ನಿವೀರರಿಗೆ ಉದ್ಯೋಗದ ಆಫರ್ ನೀಡಿದ ಆನಂದ್ ಮಹೀಂದ್ರ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

dh file

ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ಕುರಿತು ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಆದರೆ ಈ ಮಧ್ಯೆ, ಉದ್ಯಮಿ ಆನಂದ್ ಮಹೀಂದ್ರ ಅವರು ಅಗ್ನಿವೀರರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಮುಂದಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಗ್ನಿಪಥ ಯೋಜನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಬೇಸರ ಮೂಡಿಸಿದೆ.

ಮಹೀಂದ್ರಾ ಸಮೂಹ ಸಂಸ್ಥೆಗಳಲ್ಲಿ, ಅರ್ಹ, ಕೌಶಲ ಹೊಂದಿರುವ ಮತ್ತು ಪರಿಣತ ಅಗ್ನಿವೀರರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುತ್ತದೆ. ಇದರಿಂದ, ನಮಗೆ ಸಮರ್ಥ ಅಭ್ಯರ್ಥಿ ದೊರೆಯಲಿದೆ ಎಂದು ಆನಂದ್ ಮಹೀಂದ್ರ ಹೇಳಿದ್ದಾರೆ.

ಮಹೀಂದ್ರಾ ಸಮೂಹದ ವಿವಿಧ ಉದ್ಯಮಗಳಲ್ಲಿ ಅಗ್ನಿವೀರರಿಗೆ ಉದ್ಯೋಗ ಒದಗಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು