ಭಾನುವಾರ, ಜೂನ್ 26, 2022
29 °C

ಗ್ರೀನ್‌ಫೀಲ್ಡ್ ಕಾಲೊನಿಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ ಪಿಎಂಗೆ ಆಂಧ್ರ ಸಿಎಂ ಪತ್ರ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಹೈದರಾಬಾದ್:‌ ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರಗಳಿಗೆ ನೀಡುತ್ತಿರುವ ನೆರವಿನ ಭಾಗವಾಗಿ ಗ್ರೀನ್‌ಫೀಲ್ಡ್‌ ಕಾಲೊನಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ಮನವಿ ಮಾಡಿದ್ದಾರೆ.

ಈ ಸಂಬಂಧ ಪ್ರಧಾನಿಗೆ ಪತ್ರ ಬರೆದಿರುವ ಜಗನ್‌, ಕೇಂದ್ರ ಸರ್ಕಾರವು ಆಂಧ್ರ ಪ್ರದೇಶಕ್ಕೆ ಕಳೆದ 7 ವರ್ಷಗಳಲ್ಲಿ ಅಂದಾಜು 3 ಲಕ್ಷ ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದರೊಂದಿಗೆ ಸುಮಾರು 3 ಕೋಟಿಗೂ ಹೆಚ್ಚು ಮನೆಗಳನ್ನು ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.

ಮುಂದುವರಿದು, ಆಂಧ್ರ ಪ್ರದೇಶ ಸರ್ಕಾರವು 68,381 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿದ್ದು, 17,005 ಗ್ರೀನ್‌ಫೀಲ್ಡ್‌ ಕಾಲೊನಿಗಳಲ್ಲಿನ 31 ಲಕ್ಷ ಫಲಾನುಭವಿಗಳಿಗೆ ವಸತಿ ಹಂಚಿಕೆ ಮಾಡಿದೆ. ಪಿಎಂಎವೈ ಗ್ರಾಮೀಣ ಮತ್ತು ನಗರ ಯೋಜನೆಗಳಡಿ 28.30 ಲಕ್ಷ ಮನೆಗಳನ್ನು ನಿರ್ಮಿಸಲು ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಅಂದಾಜು 50,944 ಕೋಟಿ ರೂ. ನೆರವು ನೀಡಲಿದೆ ಎಂದು ಮಾಹಿತಿ ನೀಡಿದ್ದಾರೆ.

ಕಾಲೋನಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ದೊಡ್ಡ ಮಟ್ಟದಲ್ಲಿ ವೆಚ್ಚವನ್ನು ಭರಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದು. ಹೀಗಾಗಿ ಮೂಲ ಸೌಕರ್ಯ ಅಭಿವೃದ್ಧಿಗೆ ನೆರವಾಗುವಂತೆ ವಸತಿ, ನಗರಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯಗಳಿಗೆ ನಿರ್ದೇಶನ ನೀಡಬೇಕು ಎಂದು ಪ್ರಧಾನಿಯನ್ನು ಕೋರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು