ಮಚಿಲಿಪಟ್ಟಣ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೋಮವಾರದ ಭಾರತ ಬಂದ್ಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ ಘೋಷಿಸಿದೆ ಎಂದು ಆಂಧ್ರ ಪ್ರದೇಶದ ಮಾಹಿತಿ ಮತ್ತು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ ತಿಳಿಸಿದ್ದಾರೆ.

ಆಂಧ್ರ ಪ್ರದೇಶ ಸರ್ಕಾರ, ವೈಎಸ್ಆರ್ ಕಾಂಗ್ರೆಸ್ ಬಂದ್ಗೆ ಬೆಂಬಲ ನೀಡುತ್ತಿವೆ. ಸೆಪ್ಟೆಂಬರ್ 26ರ ಮಧ್ಯರಾತ್ರಿಯಿಂದ 27ರ ಸಂಜೆಯವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳೂ ರಸ್ತೆಗಿಳಿಯುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಓದಿ:ಸಂಕಷ್ಟದ ಸಮಯದಲ್ಲಿ ಭಾರತ್ ಬಂದ್ಗೆ ಕರೆ ನೀಡಿರುವುದು ಸರಿಯಲ್ಲ: ಬೊಮ್ಮಾಯಿ

ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಕಾರ್ಮಿಕರೂ ಬಂದ್ಗೆ ಬೆಂಬಲ ಸೂಚಿಸಿದ್ದಾರೆ.

ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಖಾಸಗೀಕರಣವನ್ನು ವಿರೋಧಿಸುವುದಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಎಡಪಕ್ಷಗಳು, ಕಾಂಗ್ರೆಸ್ ಮತ್ತು ತೆಲುಗುದೇಶಂ ಪಕ್ಷಗಳೂ ಬಂದ್ಗೆ ಬೆಂಬಲ ಘೋಷಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.