ಶನಿವಾರ, ಸೆಪ್ಟೆಂಬರ್ 26, 2020
23 °C

ವಿಜಯವಾಡ ಅಗ್ನಿ ದುರಂತ: ಮೃತರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಘೋಷಿಸಿದ ಜಗನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Jagan Mohan Reddy

ವಿಜಯವಾಡ: ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಕೋವಿಡ್‌ ಆಸ್ಪತ್ರೆಯನ್ನಾಗಿ ಪರಿವರ್ತಿಸಿದ್ದ  ಹೋಟೆಲ್‌ವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟವರ ಕುಟಂಬಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ₹50 ಲಕ್ಷ ಪರಿಹಾರಧನ ಘೋಷಿಸಿದ್ದಾರೆ.

ಈ ಬಗ್ಗ ತನಿಖೆ ನಡೆಸುವಂತೆ ಆದೇಶಿಸಿದ ಅವರು ಗಾಯಗೊಂಡಿವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
 

ಇದನ್ನೂ ಓದಿ:  ವಿಜಯವಾಡ| ಕೋವಿಡ್‌ ಆಸ್ಪತ್ರೆಯಾಗಿಸಿದ್ದ ಹೋಟೆಲ್‌ನಲ್ಲಿ ಅಗ್ನಿ ದುರಂತ: 7 ಸಾವು

ಹೋಟೆಲ್‌ನ್ನು ಭೋಗ್ಯಕ್ಕೆ ತೆಗೆದುಕೊಂಡಿದ್ದು ಖಾಸಗಿ ಆಸ್ಪತ್ರೆಯಾಗಿರುವ ರಮೇಶ್ ಹಾಸ್ಪಿಟಲ್‌ನ ರೋಗಿಗಳಿಗೆ ಅಲ್ಲಿ ಚಿಕಿತ್ಸೆ ನೀಡಲಾಗಿತ್ತು. ಘಟನೆ ವೇಳೆ 40 ರೋಗಿಗಳು ಮತ್ತು 10 ವೈದ್ಯಕೀಯ ಸಿಬ್ಬಂದಿಗಳು ಅಲ್ಲಿದ್ದರು. ತಕ್ಷಣವೇ ರಕ್ಷಣಾ ಕಾರ್ಯ ಕೈಗೊಳ್ಳಲಾಗಿತ್ತು ಎಂದು ಆಂಧ್ರಪ್ರದೇಶದ ಗೃಹ ಸಚಿವೆ ಸುಚರಿತಾ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು