ಮಂಗಳವಾರ, ಮಾರ್ಚ್ 28, 2023
31 °C

ಆಂಧ್ರ ಪ್ರದೇಶದ ಪೊಲೀಸ್‌ ಠಾಣೆಯಲ್ಲಿ ಹೊತ್ತಿ ಉರಿದ ವಾಹನಗಳು

ಏಜನ್ಸೀಸ್ Updated:

ಅಕ್ಷರ ಗಾತ್ರ : | |

ವಿಶಾಖಪಟ್ಟಣ: ಇಲ್ಲಿನ ಕಾಂಚರಪಾಲಂ ಪೊಲೀಸ್‌ ಠಾಣೆಯ ವ್ಯಾಪ್ತಿಯ ಪೊಲೀಸ್ ವಶದಲ್ಲಿದ್ದ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್‌ ಮಾಡಿದ್ದು, ವಾಹನಗಳು ಬೆಂಕಿ ಹೊತ್ತಿ ಉರಿಯುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದೆ.

ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.  ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ 24 ಬೈಕ್, ಒಂದು ಆಟೋ ಮತ್ತು ಒಂದು ಕಾರು ಸುಟ್ಟು ಭಸ್ಮವಾಗಿದೆ ಎಂದು ವಿಶಾಖಪಟ್ಟಣ ವಲಯ 2ರ ಡಿಸಿಪಿ ಆನಂದ್‌ ರೆಡ್ಡಿ ಹೇಳಿದ್ದಾರೆ.

ನ್ಯಾಯಾಲಯದ ವಿವಾದದಲ್ಲಿರುವ ವಾಹನಗಳು, ದಂಡ ಕಟ್ಟದೇ ಪೊಲೀಸರು ಜಪ್ತಿ ಮಾಡಿದ ವಾಹನಗಳು ಹಾಗೂ ವಾರಾಸುದಾರರಿಲ್ಲದ ವಾಹನಗಳನ್ನು ಪೊಲೀಸ್‌ ಠಾಣೆ ಆವರಣದಲ್ಲಿ ನಿಲ್ಲಿಸಲಾಗಿತ್ತು. ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಬಹುತೇಕ ವಾಹನಗಳು ಪೂರ್ತಿ ಸುಟ್ಟು ಭಸ್ಮವಾಗಿವೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು