ಹೈದರಾಬಾದ್: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಗುರುವಾರ ನಡೆದ ಭೀಕರ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನ ಪತಿಯನ್ನು ಹತ್ಯೆಗೈದು, ಅವನ ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ಹೊತ್ತೊಯ್ದಿದ್ದಾಳೆ.

ತಿರುಪತಿ ಬಳಿಯ ರೇಣಿಗುಂಟದಲ್ಲಿ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ವಸುಂಧರಾ ತಮ್ಮ ಮನೆಯಲ್ಲಿ ನಡೆದ ಜಗಳದಲ್ಲಿ ಪತಿ ರವಿಚಂದ್ರನ್ (53) ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಬಳಿಕ ಆತನ ತಲೆಯನ್ನು ಕತ್ತರಿಸಿ ಬ್ಯಾಗ್‌ನಲ್ಲಿ ಹಾಕಿಕೊಂಡು ಠಾಣೆಗೆ ಬಂದು ಶರಣಾಗಿದ್ದಾಳೆ.

ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಅಧಿಕಾರಿಗಳು ಆರೋಪಿಯನ್ನು ಅಲ್ಲಿಗೆ ಕರೆತಂದು ಸಾಕ್ಷ್ಯ ಸಂಗ್ರಹಿಸಿದ್ದಾರೆ. ಮೃತದೇಹವನ್ನು ಶವ ಪರೀಕ್ಷೆಗಾಗಿ ಎಸ್‌ವಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.

ರವಿಚಂದ್ರನ್ ಮತ್ತು ವಸುಂಧರಾ ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ ಯಾವುದೋ ವಿಚಾರಕ್ಕೆ ದಂಪತಿ ನಡುವೆ ಮತ್ತೆ ಜಗಳ ನಡೆದಿದ್ದು, ಆಕ್ರೋಶಗೊಂಡ ಮಹಿಳೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಳೆ. ಅಷ್ಟಕ್ಕೆ ಸುಮ್ಮನಾಗದೆ ಆತನ ತಲೆಯನ್ನು ಕತ್ತರಿಸಿ ಠಾಣೆಗೆ ಹೊತ್ತೊಯ್ದಿದ್ದಾಳೆ.

ದಂಪತಿಗೆ 20 ವರ್ಷದ ಮಗನಿದ್ದಾನೆ. ಹತ್ಯೆಗೀಡಾದ ರವಿಚಂದ್ರನ್ ಗುಂಟೂರು ಜಿಲ್ಲೆಯ ನರಸರಾವ್‌ಪೇಟೆಯ ಮೂಲದವರು. ಘಟನೆ ಕುರಿತು ಪೊಲೀಸರು ಆತನ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.