ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರಾವತಿ ಭೂ ಹಗರಣ: ‘ಸುಪ್ರೀಂ’ನಿಂದ ಅರ್ಜಿ ಹಿಂಪಡೆದ ಆಂಧ್ರ ಪ್ರದೇಶ ಸರ್ಕಾರ

Last Updated 22 ಜುಲೈ 2021, 9:01 IST
ಅಕ್ಷರ ಗಾತ್ರ

ನವದೆಹಲಿ: ಅಮರಾವತಿ ಭೂ ಹಗರಣದ ಬಗ್ಗೆ ಎಸ್‌ಐಟಿ ತನಿಖೆಯನ್ನು ತಡೆಹಿಡಿದಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಆಂಧ್ರಪ್ರದೇಶ ಸರ್ಕಾರ ಗುರುವಾರ ಹಿಂಪಡೆದಿದೆ.

ಈ ಸಂಬಂಧ ಹೈಕೋರ್ಟ್‌ ಮೊರೆ ಹೋಗುವುದಾಗಿ ನ್ಯಾಯಮೂರ್ತಿ ವಿನೀತ್‌ ಶರಣ್‌ ಮತ್ತು ದಿನೇಶ್‌ ಮಾಹೇಶ್ವರಿ ಅವರ ಪೀಠಕ್ಕೆ ರಾಜ್ಯ ಸರ್ಕಾರವು ತಿಳಿಸಿದೆ.

‘ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಅಮರಾವತಿ ಭೂ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಲು ಸರ್ಕಾರದ ಒಪ್ಪಿಗೆಯಿದೆ’ ಎಂದು ಮಾರ್ಚ್ 5 ರಂದು ಆಂಧ್ರಪ್ರದೇಶ ಸರ್ಕಾರವು ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು.

‘ಅಮರಾವತಿ ಭೂ ಹಗರಣದ ಬಗ್ಗೆ ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್‌ ರದ್ದುಗೊಳ್ಳಿಸಬೇಕು. ಈ ಮೂಲಕ ಹಗರಣದ ತನಿಖೆಗೆ ಅವಕಾಶ ಕಲ್ಪಿಸಬೇಕು’ ಎಂದು ಆಂಧ್ರಪ್ರದೇಶ ಸರ್ಕಾರವು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಈ ಹಗರಣದ ಬಗ್ಗೆ ತನಿಖೆ ನಡೆಸಲು ಮುಖ್ಯಮಂತ್ರಿ ವೈ.ಎಸ್.ಜಗನ್‌ಮೋಹನ್‌ ರೆಡ್ಡಿ ಅವರ ಸರ್ಕಾರವು ಡಿಜಿಪಿ ನೇತೃತ್ವದ 10 ಸದಸ್ಯರ ಎಸ್‌ಐಟಿ ತಂಡವನ್ನು ರಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT