ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಸೆವಾಲಾ ಹಂತಕನ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಗ್ಯಾಂಗ್‌ಸ್ಟರ್

Last Updated 2 ಜೂನ್ 2022, 16:23 IST
ಅಕ್ಷರ ಗಾತ್ರ

ಚಂಡೀಗಡ: ಪಂಜಾಬಿ ಜನಪ್ರಿಯ ಗಾಯಕ ಸಿಧು ಮೂಸೆವಾಲಾ ಹಂತಕನ ಬಗ್ಗೆ ಮಾಹಿತಿ ನೀಡಿದವರಿಗೆ ₹5 ಲಕ್ಷ ನಗದು ಬಹುಮಾನ ನೀಡುವುದಾಗಿ ಹರಿಯಾಣ ಮೂಲದ ಗ್ಯಾಂಗ್‌ಸ್ಟರ್ ಘೋಷಣೆ ಮಾಡಿದ್ದಾನೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಮೂಸೆವಾಲಾ ಹತ್ಯೆಗೆ ಸೇಡು ತೀರಿಸಿಕೊಳ್ಳುವ ಇರಾದೆ ವ್ಯಕ್ತಪಡಿಸಿದ್ದಾನೆ.

ಮೂಸೆವಾಲಾ ಹಂತಕನ ಬಗ್ಗೆ ಯಾರಾದರೂ ಮಾಹಿತಿ ನೀಡಿದರೆ ₹5 ಲಕ್ಷ ಬಹುಮಾನ ನೀಡಲಾಗುವುದು. ಈ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ಗ್ಯಾಂಗ್‌ಸ್ಟರ್ ಭೂಪಿ ರಾಣಾ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾನೆ.

ಮೇ 29ರಂದು ಪಂಜಾಬಿ ಗಾಯಕ ಮೂಸೆವಾಲಾ ದುಷ್ಕರ್ಮಿಗಳ ಗುಂಡೇಟಿನಿಂದ ಹತ್ಯೆಗೀಡಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT