ಶನಿವಾರ, ಏಪ್ರಿಲ್ 1, 2023
23 °C

ಅನಿಲ್ ದೇಶ್‌ಮುಖ್‌ ಪ್ರಕರಣ: ವಾಜೆ ಹೇಳಿಕೆ ದಾಖಲಿಸಲು ಸಿಬಿಐಗೆ ಅನುಮತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ ನಾಯಕ ಅನಿಲ್ ದೇಶ್‌ಮುಖ್ ವಿರುದ್ಧದ ಭ್ರಷ್ಟಾಚಾರದ ಆರೋಪದ ತನಿಖೆಯ ಭಾಗವಾಗಿ ವಜಾಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ಹೇಳಿಕೆಯನ್ನು ದಾಖಲಿಸಲು ವಿಶೇಷ ಎನ್‌ಐಎ ನ್ಯಾಯಾಲಯ ಶುಕ್ರವಾರ ಸಿಬಿಐಗೆ ಅನುಮತಿ ನೀಡಿದೆ.

ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಮನೆಯ ಬಳಿ ಸ್ಫೋಟಕ ತುಂಬಿದ ವಾಹನ ವಶಪಡಿಸಿಕೊಂಡ ಮತ್ತು ವಾಹನ ಕಳವು ಆಗುವ ಮೊದಲು ತನ್ನ ಬಳಿಯಿದೆ ಎಂದು ಹೇಳಿಕೊಂಡಿದ್ದ ಥಾಣೆ ಮೂಲದ ಉದ್ಯಮಿ ಮನ್ಸುಖ್ ಹಿರೇನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ.

ನವೀ ಮುಂಬಯಿಯ ತಾಲೋಜ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ವಾಜೆ ಅವರನ್ನು ಭೇಟಿಯಾಗಲು ಕೋರಿ ಸಿಬಿಐ ಗುರುವಾರ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ದೇಶ್‌ಮುಖ್ ವಿರುದ್ಧದ ತನಿಖೆಗೆ ಸಂಬಂಧಿಸಿದಂತೆ ಅವರ ಹೇಳಿಕೆಯನ್ನು ದಾಖಲಿಸಿದೆ.

ಐಪಿಎಸ್ ಅಧಿಕಾರಿ ಮತ್ತು ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಅಂದಿನ ರಾಜ್ಯ ಗೃಹ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ ನಂತರ ಸಿಬಿಐ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿ ನಿಬಂಧನೆಗಳ ಅಡಿಯಲ್ಲಿ ದೇಶಮುಖ್ ಅವರನ್ನು ತನಿಖೆ ನಡೆಸುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು