ಗುರುವಾರ , ಮಾರ್ಚ್ 30, 2023
23 °C

ಮಹಾರಾಷ್ಟ್ರ: ಮಾಜಿ ಗೃಹ ಸಚಿವ ಅನಿಲ್ ದೇಶಮುಖ್‌ ಆರೋಗ್ಯ ತಪಾಸಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಆರೋಗ್ಯ ತಪಾಸಣೆಯನ್ನು ದಕ್ಷಿಣ ಮುಂಬೈನ ಜೆ.ಜೆ ಆಸ್ಪತ್ರೆಯಲ್ಲಿ ಗುರುವಾರ ನಡೆಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‌ಅನಿಲ್ ದೇಶಮುಖ್ ಅವರ ಆರೋಗ್ಯ ಸ್ಥಿರವಾಗಿರುವುದು ತಪಾಸಣೆಯಿಂದ ತಿಳಿದುಬಂತು. ನಂತರ ಅವರನ್ನು ಇ.ಡಿ ಕಚೇರಿಗೆ  ಕರೆತರಲಾಯಿತು ಎಂದೂ ಅಧಿಕಾರಿ ಹೇಳಿದರು.

ವಿಚಾರಣೆಗೆ ಸತತ ಗೈರು ಹಾಜರಾಗಿದ್ದರಿಂದ ದೇಶಮುಖ್‌ ವಿರುದ್ಧ ಇ.ಡಿ ಸಮನ್ಸ್‌ ಜಾರಿಗೊಳಿಸಿತ್ತು. ತಮ್ಮ ವಿರುದ್ಧದ ಸಮನ್ಸ್‌ಗಳನ್ನು ವಜಾಗೊಳಿಸುವಂತೆ ಕೋರಿ ದೇಶಮುಖ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಕಳೆದ ವಾರ ತಿರಸ್ಕರಿಸಿದ್ದರಿಂದ  ಅವರು ನ. 1ರಂದು ಇ.ಡಿ ಮುಂದೆ ಹಾಜರಾಗಿದ್ದರು. ವಿಚಾರಣೆ ನಂತರ ತಡರಾತ್ರಿ ಅವರನ್ನು ಬಂಧಿಸಲಾಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು