ಮುಂಬೈ: ತಮ್ಮ ವಿರುದ್ಧ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್‌ಗಳನ್ನು ವಜಾ ಮಾಡಬೇಕು ಎಂದು ಕೋರಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಗುರುವಾರ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿ ರೇವತಿ ಮೋಹಿತೆ ಡೇರೆ ಅವರಿರುವ ಏಕಸದಸ್ಯ ಪೀಠದ ಮುಂದೆ ದೇಶಮುಖ್ ಅವರ ಅರ್ಜಿ ವಿಚಾರಣೆಗೆ ಬಂದಿತು. ಆದರೆ, ಈ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ನ್ಯಾಯಮೂರ್ತಿ ರೇವತಿ ಹೇಳಿದರು.

ಈ ನಿರ್ಧಾರಕ್ಕೆ ಅವರು ಯಾವುದೇ ಕಾರಣ ನೀಡಲಿಲ್ಲ. ಹೀಗಾಗಿ ಈ ಅರ್ಜಿಯನ್ನು ಮತ್ತೊಂದು ನ್ಯಾಯಪೀಠಕ್ಕೆ ವರ್ಗಾಯಿಸಲಾಯಿತು.

ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ದೇಶಮುಖ್ ಹಾಗೂ ಅವರ ಆಪ್ತರ ವಿರುದ್ಧ ಏಪ್ರಿಲ್‌ನಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಇದರ ಬೆನ್ನಲ್ಲೇ, ಜಾರಿ ನಿರ್ದೇಶನಾಲಯ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.