ಮಹಾರಾಷ್ಟ್ರ: ದೇಶಮುಖ್ ಪತ್ನಿಗೆ ಇ.ಡಿ ಸಮನ್ಸ್

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಪತ್ನಿ ಆರತಿ ದೇಶಮುಖ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿ ಮಾಡಿದ್ದು, ಗುರುವಾರ (ಜುಲೈ 15) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಇ.ಡಿ ಸಮನ್ಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ದೇಶಮುಖ್ ಪರ ವಕೀಲ ಕಮಲೇಶ್ ಗುಮ್ರೆ, ‘ಅನಿಲ್ ದೇಶಮುಖ್ ವಿರುದ್ಧದ ಪ್ರಕರಣಕ್ಕೂ ಆರತಿ ಅವರಿಗೂ ಯಾವುದೇ ಸಂಬಂಧ ಇಲ್ಲ’ ಎಂದು ಹೇಳಿದರು.
ಅನಿಲ್ ದೇಶಮುಖ್ ವಿರುದ್ಧ ದಾಖಲಾಗಿರುವ ಬಹುಕೋಟಿ ಲಂಚ ಮತ್ತು ಸುಲಿಗೆ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತು ಇ.ಡಿ ತನಿಖೆ ನಡೆಸುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.