ಭಾನುವಾರ, ನವೆಂಬರ್ 29, 2020
20 °C

ಲವ್ ಜಿಹಾದ್ ತಡೆಗೆ ಕಾಯ್ದೆ; ಹರಿಯಾಣ ಸರ್ಕಾರ ಚಿಂತನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚಂಡೀಗಡ: ಲವ್ ಜಿಹಾದ್ ತಡೆಗೆ ಕಾಯ್ದೆಯನ್ನು ರೂಪಿಸಲು ಹರಿಯಾಣ ಸರ್ಕಾರ ಚಿಂತನೆ ನಡೆಸಿದೆ ಎಂಂದು ಗೃಹ ಸಚಿವ ಅನಿಲ್ ವಿಜ್ ಭಾನುವಾರ ತಿಳಿಸಿದ್ದು, ಈ ಸಂಬಂಧ ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಈ ಸಂಬಂಧ ಕಾಯ್ದೆಯನ್ನು ರೂಪಿಸಲಿದೆ ಎಂದು ಆ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೂ ಶನಿವಾರವಷ್ಟೇ ಹೇಳಿದ್ದರು. 

ಕಳೆದ ವಾರ ಹರಿಯಾಣದ ಬಲ್ಲಾಭ್‌ಗರ್‌ನಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಗುಂಡಿನಿಂದ ಹತ್ಯೆ ಮಾಡಲಾಗಿತ್ತು. ಕುಟುಂಬ ಸದಸ್ಯರು, ‘ವ್ಯಕ್ತಿಯೊಬ್ಬ, ವಿವಾಹ ಆಗುವಂತೆ, ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಿದ್ದ’ಎಂದು ಆರೋಪಿಸಿದ್ದರು.‌

ವಿಎಚ್‌ಪಿ ಕಾರ್ಯಾಧ್ಯಕ್ಷ ಅಲೋಕ್‌ ಕುಮಾರ್ ಅವರು ಮೃತಳ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದು, ಲವ್ ಜಿಹಾದ್ ಬೆಳವಣಿಗೆ ಕುರಿತು ಆತಂಕ ವ್ಯಕ್ತಪಡಿಸಿದ್ದರು.

ಹರಿಯಾಣ ಸರ್ಕಾರ ಪ್ರಕರಣದ ತನಿಖೆಗೆ ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿತ್ತು. ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ತೌಸಿಫ್‌ ಮತ್ತು ರೆಹಾನ್‌ ಎಂಬವರನ್ನು ಈ ಸಂಬಂಧ ಬಂಧಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು