ಡೆಹ್ರಾಡೂನ್:ಅಂಕಿತಾ ಭಂಡಾರಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದಿದೆ ಎಂದು ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೆಸಾರ್ಟ್‌ಗೆ ಭೇಟಿ ನೀಡಿದ್ದ ವ್ಯಕ್ತಿಯ ಜೊತೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ್ದಕ್ಕೆ ರೆಸಾರ್ಟ್‌ನ ಸ್ವಾಗತಕಾರಿಣಿಅಂಕಿತಾಭಂಡಾರಿ ಹತ್ಯೆ ಮಾಡಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆರೆಸಾರ್ಟ್‌ನ ಮಾಲೀಕ ಪುಲ್ಕಿತ್ ಆರ್ಯ, ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ಮ್ಯಾನೇಜರ್ ಅಂಕಿತ್ ಗುಪ್ತಾನನ್ನು ಸೆ. 23ರಂದು ಪೊಲೀಸರು ಬಂಧಿಸಿದ್ದರು.

ಮೂವರನ್ನು ಘಟನೆ ನಡೆದ ಸ್ಥಳಕ್ಕೆ ಕರೆದೊಯ್ಯಬಹುದು. ಎಫ್‌ಐಆರ್ ದಾಖಲಿಸದೆ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಅಮಾನತುಗೊಂಡಿರುವ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ವೈಭವ್ ಪ್ರತಾಪ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂಕಿತಾ ಸ್ನೇಹಿತೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಚಿಲ್ಲಾ ಕಾಲುವೆಯಲ್ಲಿ ಪತ್ತೆಯಾದ ಆಕೆಯ ಮೊಬೈಲ್ ಅನ್ನು ಫೋರೆನ್ಸಿಕ್ ತಂಡಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.