ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕ್ಕರೆ ಕಾರ್ಖಾನೆಗಳ ಮಾರಾಟದಲ್ಲಿ ₹ 25000 ಕೋಟಿ ಹಗರಣ:ತನಿಖೆಗೆ ‘ಅಣ್ಣಾ’ ಪತ್ರ

Last Updated 25 ಜನವರಿ 2022, 13:01 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಸಹಕಾರಸಕ್ಕರೆ ಕಾರ್ಖಾನೆಗಳ ಮಾರಾಟದಲ್ಲಿ ನಡೆದಿದೆ ಎನ್ನಲಾದ ₹25000 ಕೋಟಿ ಹಗರಣ ಕುರಿತು ತನಿಖೆ ನಡೆಸಬೇಕು ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಆಗ್ರಹಪಡಿಸಿದ್ದಾರೆ.

ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದು, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

‘ಈ ಹಗರಣದಲ್ಲಿ ರಾಜಕಾರಣಿಗಳು, ಅಧಿಕಾರಿಗಳು ಭಾಗಿಯಾಗಿರುವ ಶಂಕೆಇದೆ. ಸಹಕಾರಸಕ್ಕರೆ ಕಾರ್ಖಾನೆಗಳನ್ನು ಕೈಗೆಟುಕುವ ದರಕ್ಕೆ ಖಾಸಗಿಯವರಿಗೆ ಮಾರಲಾಗಿದೆ. ಈ ಬಗ್ಗೆ ಪಾರದರ್ಶಕ ತನಿಖೆ ಆಗಬೇಕಿದೆ’ ಎಂದಿದ್ದಾರೆ.

ಸಕ್ಕರೆ ಕಾರ್ಖಾನೆಗಳ ಮಾರಾಟದ ವಿರುದ್ಧ ನಾವು ಹೋರಾಟ ನಡೆಸುತ್ತಿದ್ದೇವೆ. 2017ರಲ್ಲಿ ಮುಂಬೈನಲ್ಲಿ ದೂರು ದಾಖಲಿಸಿದ್ದೆವು. ಡಿಐಜಿ ದರ್ಜೆಯ ಅಧಿಕಾರಿಯನ್ನು ತನಿಖೆಗೆ ನಿಯೋಜಿಸಲಾಗಿತ್ತು. ಈ ಹಗರಣ ಕುರಿತು ಕ್ರಮ ಜರುಗಿಸಲು ಮಹಾರಾಷ್ಟ್ರ ಸರ್ಕಾರ ಸಿದ್ಧವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT