ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಣ್ಣಾಮಲೈ ನೇಮಕ ಸಾಧ್ಯತೆ

ಚೆನ್ನೈ: ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷರಾಗಿರುವ ಎಲ್.ಮುರುಗನ್ ಅವರು ಬುಧವಾರ ಕೇಂದ್ರ ಸಂಪುಟದಲ್ಲಿ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ, ರಾಜ್ಯ ಘಟಕದ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಎಂಬ ಚರ್ಚೆ ಪಕ್ಷದಲ್ಲಿ ಆರಂಭವಾಗಿದೆ.
ನೂತನ ಅಧ್ಯಕ್ಷ ಸ್ಥಾನಕ್ಕೆ ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರ ಹೆಸರು ಮುಂಚೂಣಿಯಲ್ಲಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅವರು ಅರವಕುರಿಚಿ ಕ್ಷೇತ್ರದಿಂದ ಸ್ಪರ್ಧಿಸಿ, ಪರಾಭವಗೊಂಡಿದ್ದರು.
ಎಐಎಡಿಎಂಕೆ ತೊರೆದು ಬಿಜೆಪಿ ಸೇರಿ, ಶಾಸಕರಾಗಿ ಆಯ್ಕೆಯಾಗಿರುವ ಎನ್.ನಾಗೇಂದ್ರನ್ ಅವರ ಹೆಸರೂ ಕೇಳಿಬರುತ್ತಿದೆ.
‘ನಾಗೇಂದ್ರನ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ನೇಮಕಗೊಂಡಿದ್ದಾರೆ. ಅಲ್ಲದೇ, ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮ ಇರುವ ಕಾರಣ ನಾಗೇಂದ್ರನ್ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆಗಳಿಲ್ಲ. ಹೀಗಾಗಿ ಅಣ್ಣಾಮಲೈ ಅವರನ್ನೇ ಈ ಸ್ಥಾನಕ್ಕೆ ನೇಮಿಸುವ ಸಾಧ್ಯತೆಗಳೇ ಹೆಚ್ಚು’ ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.