ಬುಧವಾರ, ಜೂನ್ 23, 2021
30 °C

ಪೊಲೀಸರ ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ನ್ಯಾಯಾಲಯಕ್ಕೆ ಶರಣು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕಾನ್ಪುರ (ಉತ್ತರ ಪ್ರದೇಶ):‌ ಎಂಟು ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಕಾಸ್‌ ದುಬೆಯ ಮತ್ತೊಬ್ಬ ಸಹಚರ ಸೋಮವಾರ ನ್ಯಾಯಲಯದ ಎದುರು ಶರಣಾಗಿದ್ದಾನೆ.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬ್ರಜೇಶ್ ಶ್ರೀವಾಸ್ತವ್, ’ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಸೈನಿ ಎಂಬ ಆರೋಪಿ ಕಾನ್ಪುರದ ದೇಹಾತ್‌ನ ನ್ಯಾಯಾಲಯಕ್ಕೆ ಶರಣಾಗಿದ್ದಾನೆ’ ಎಂದು ತಿಳಿಸಿದ್ದಾರೆ.

ಜುಲೈ 2 ರಂದು ಬಿಕ್ರು ಗ್ರಾಮದಲ್ಲಿ ನಡೆದ ಪೊಲೀಸರ ಹತ್ಯೆ ಪ್ರಕರಣದಲ್ಲಿ ಈತನ ಹೆಸರೂ ಕೇಳಿಬಂದಿತ್ತು. ಅಂದಿನಿಂದಲೂ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಮತ್ತು ಕಾನ್ಪುರ ಪೊಲೀಸರು ಗೋವಿಂದ ಸೈನಿಗಾಗಿ ಶೋಧ ನಡೆಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು