ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೃತ್‌ಪಾಲ್‌ ಹೊಸ ಫೋಟೊ ಪತ್ತೆ

Last Updated 27 ಮಾರ್ಚ್ 2023, 14:28 IST
ಅಕ್ಷರ ಗಾತ್ರ

ಚಂಡೀಗಢ (ಪಿಟಿಐ): ಸಿಖ್‌ ಮೂಲಭೂತವಾದಿ ಧರ್ಮ ಪ್ರಚಾರಕ ಹಾಗೂ ಖಾಲಿಸ್ತಾನ ಪರ ಸಹಾನುಭೂತಿ ಹೊಂದಿರುವ ಅಮೃತ್‌ಪಾಲ್‌ ಸಿಂಗ್ ತನ್ನ ಸಹಚರ ಪಪಲ್‌ಪ್ರೀತ್‌ ಸಿಂಗ್‌ನೊಂದಿಗೆ ಇರುವ ಮತ್ತೊಂದು ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರ ಹರಿದಾಡುತ್ತಿದೆ.

ಪೊಲೀಸ್‌ ಕಾರ್ಯಾಚರಣೆ ಆರಂಭಿಸಿದ ಮರುದಿನ ತೆಗೆದ ಫೋಟೊ ಇದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿತ್ರದಲ್ಲಿ ಅಮೃತ್‌ಪಾಲ್‌ ಸಿಂಗ್‌ ಜಾಕೆಟ್‌, ಕಂದು ಕೆಂಪು ಬಣ್ಣದ ಟರ್ಬನ್‌ ಮತ್ತು ಸನ್‌ಗ್ಲಾಸ್‌ ಧರಿಸಿದ್ದಾನೆ. ಪಾನೀಯದ ಬಾಟಲಿಯನ್ನು ಹಿಡಿದುಕೊಂಡಿದ್ದಾನೆ. ಸಹಚರ ಪಕ್ಕದಲ್ಲಿ ಕುಳಿತಿದ್ದಾನೆ.

ಪಪಲ್‌ಪ್ರೀತ್‌ ಸಿಂಗ್‌, ಅಮೃತ್‌ ಪಾಲ್‌ ಮಾರ್ಗದರ್ಶಕ ಎಂದು ಹೇಳಲಾಗುತ್ತದೆ. ಈತ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಆರೋಪ ಇದೆ.

ಸಹಚರನ ಬಂಧನ:

ಈ ಮಧ್ಯೆ ಇನ್ನೊಬ್ಬ ಸಹಚರ ವರಿಂದರ್‌ ಸಿಂಗ್‌ ಅಲಿಯಾಸ್‌ ಫೌಝಿಯನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ) ಅಡಿಯಲ್ಲಿ ಅಮೃತಸರ ಪೊಲೀಸರು ಬಂಧಿಸಿದ್ದಾರೆ. ಈತನನ್ನು ಅಸ್ಸಾಂನ ದಿಬ್ರುಗಢ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

‘ವಾರಿಸ್‌ ಪಂಜಾಬ್‌ ದೇ’ ಸಂಘಟನೆಯ ಮುಖ್ಯಸ್ಥ ಅಮೃತ್‌ಪಾಲ್‌ ಮತ್ತು ಇತರ ಸದಸ್ಯರು ತಲೆಮರೆಸಿಕೊಂಡಿದ್ದು, ಮಾ.18ರಿಂದ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT