ಶುಕ್ರವಾರ, ಫೆಬ್ರವರಿ 3, 2023
18 °C

ಮಹಿಳೆಯ ಹೊದಿಕೆ ಮೇಲೆ ವ್ಯಕ್ತಿಯಿಂದ ಮೂತ್ರವಿಸರ್ಜನೆ: ಮತ್ತೊಂದು ಘಟನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆ ಮೇಲೆ ಪಾನಮತ್ತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜಿಸಿದ ಘಟನೆ ನಡೆದ 10 ದಿನಗಳ ಅಂತರದಲ್ಲಿ ಅಂಥದೇ ಘಟನೆಯೊಂದು ಏರ್‌ ಇಂಡಿಯಾದ ಮತ್ತೊಂದು ವಿಮಾನದಲ್ಲಿ ನಡೆದಿರುವುದು ಗೊತ್ತಾಗಿದೆ.

ಪ್ಯಾರಿಸ್‌ನಿಂದ ದೆಹಲಿಗೆ ಸಂಚರಿಸುತ್ತಿದ್ದ ವಿಮಾನದಲ್ಲಿ ಡಿ. 6ರಂದು ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಹೊದಿಕೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು.

ಆದರೆ, ಆ ವ್ಯಕ್ತಿಯು ಲಿಖಿತವಾಗಿ ಕ್ಷಮೆ ಕೇಳಿದ ಹಿನ್ನೆಲೆಯಲ್ಲಿ ಆತನ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

‘ಪಾನಮತ್ತನಾಗಿದ್ದ ವ್ಯಕ್ತಿ, ವಿಮಾನ ಸಿಬ್ಬಂದಿ ನೀಡುತ್ತಿದ್ದ ಸೂಚನೆಗಳನ್ನು ಪಾಲಿಸುತ್ತಿರಲಿಲ್ಲ. ನಂತರ, ಆತ ಮಹಿಳೆಯೊಬ್ಬರ ಹೊದಿಕೆ ಮೇಲೆ ಮೂತ್ರ ವಿಸರ್ಜನೆ ಮಾಡಿದ’ ಎಂಬುದಾಗಿ ವಿಮಾನ ಸಿಬ್ಬಂದಿ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ವಿಮಾನ ಇಳಿದ ಕೂಡಲೇ ವ್ಯಕ್ತಿಯನ್ನು ಸಿಐಎಸ್‌ಎಫ್‌ ಸಿಬ್ಬಂದಿ ವಶಕ್ಕೆ ತೆಗೆದುಕೊಂಡರು. ಆತ, ಲಿಖಿತವಾಗಿ ಕ್ಷಮೆ ಕೋರಿದ. ಇಬ್ಬರು ಪ್ರಯಾಣಿಕರು ರಾಜಿಯಾದ ಹಿನ್ನೆಲೆಯಲ್ಲಿ ಆತನನ್ನು ಬಿಡುಗಡೆ ಮಾಡಲಾಯಿತು ಎಂದು ವಿಮಾನನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು