ಬುಧವಾರ, ಡಿಸೆಂಬರ್ 2, 2020
25 °C
ಮೃತಪಟ್ಟ ಪ್ರಯಾಣಿಕರ ಸಂಖ್ಯೆ 21ಕ್ಕೆ ಏರಿಕೆ

ಕೊಯಿಕ್ಕೋಡ್‌ ವಿಮಾನ ಅಪಘಾತ; ಮತ್ತೊಬ್ಬ ಪ್ರಯಾಣಿಕರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಯಿಕ್ಕೋಡ್: ಆಗಸ್ಟ್‌ 7ರ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಭಾನುವಾರ ರಾತ್ರಿ ಇಲ್ಲಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ವಿಮಾನ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 21ಕ್ಕೆ ಏರಿದೆ. 

ಮೃತಪಟ್ಟ ಮಹಿಳೆಯ ಹೆಸರು ಮಂಜುಳಾ ಕುಮಾರಿ(37). ತಮ್ಮ ಪತಿಯನ್ನು ಭೇಟಿಯಾಗಿ ಬರುವುದಕ್ಕಾಗಿ ಈ ವರ್ಷದ ಆರಂಭದಲ್ಲಿ ದುಬೈಗೆ ತೆರೆಳಿದ್ದರು. ಲಾಕ್‌ಡೌನ್ ಕಾರಣದಿಂದಾಗಿ ಅಲ್ಲೇ ಉಳಿದಿದ್ದರು.

ಕೋಯಿಕ್ಕೋಡ್‌ನ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾದ ಆ ವಿಮಾನದಲ್ಲಿ 190 ಮಂದಿ ಪ್ರಯಾಣಿಕರಿದ್ದರು. ಅಪಘಾತದಲ್ಲಿ 18 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆಪಡೆಯುತ್ತಿದ್ದ 53 ವರ್ಷ ವ್ಯಕ್ತಿಯೊಬ್ಬರು ಹಾಗೂ 68 ವರ್ಷದ ಮತ್ತೊಬ್ಬರು ಇದೇ ತಿಂಗಳಲ್ಲಿ ಸಾವನ್ನಪ್ಪಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು