ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ: 2 ವಾರದಲ್ಲಿ 3ನೇ ಪ್ರಕರಣ

ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಎರಡು ವಾರಗಳಲ್ಲಿ ಇದು 3ನೇ ಪ್ರಕರಣವಾಗಿದೆ.

ವಿದ್ಯಾರ್ಥಿನಿಯು ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆಶರಣಾಗಿದ್ದಾರೆ. ಆಕೆಯ ಕೋಣೆಯಲ್ಲಿ ಡೆತ್‌ ನೋಟ್‌ ಪತ್ತೆಯಾಗಿದ್ದು ಪೋಷಕರು ಐಎಎಸ್‌ ಮಾಡುವಂತೆ ಒತ್ತಡ ಹಾಕಿದ್ದರು. ಇದರಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲು ಮಾಡಲಾಗಿದ್ದು, ಮೃತದೇಹವನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಮಿಳುನಾಡು ಪೊಲೀಸರು ಹೇಳಿದ್ದಾರೆ.

ನಿನ್ನೆತಿರುವಳ್ಳೂರು ಜಿಲ್ಲೆಯ ಕಿಲಾಚೇರಿ ಹಾಸ್ಟೆಲ್‌ವೊಂದರಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಜುಲೈ 13 ರಂದುವಸತಿ ಶಾಲೆಯಲ್ಲಿ 12 ನೇ ತರಗತಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಹಾಸ್ಟೆಲ್ ಆವರಣದಲ್ಲಿ ಶವವಾಗಿ ಪತ್ತೆಯಾಗಿದ್ದಳು.

ಕಳೆದ ಎರಡು ವಾರಗಳಲ್ಲಿ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಘಟನೆ ಖಂಡಿಸಿ ತಮಿಳುನಾಡಿನಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ.

ರಾಜ್ಯದಲ್ಲಿ ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆಘಾತವನ್ನು ಉಂಟುಮಾಡಿದೆ ಎಂದು ಮುಖ್ಯಮಂತ್ರಿಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಇಂತಹ ಆಲೋಚನೆಗಳನ್ನು ಮಾಡಬಾರದು ಎಂದು ಅವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT